ಸಂವಿಧಾನ ತತ್ವಗಳು, ಪ್ರಜಾಪ್ರಭುತ್ವ ಎತ್ತಿಹಿಡಿಯಲು ಸ್ಥಳೀಯ ಪಕ್ಷ ಜೆಡಿಎಸ್'ಗೆ ಬೆಂಬಲ ನೀಡಿದೆವು; ಕಾಂಗ್ರೆಸ್
ರಾಷ್ಟ್ರೀಯ ಪಕ್ಷವಾಗಿ ಸಂವಿಧಾನದ ತತ್ವಗಳು ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಸಲುವಾಗಿ ಸ್ಥಳೀಯ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದೆವು ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ...

Published On :
ಬೆಂಗಳೂರು; ರಾಷ್ಟ್ರೀಯ ಪಕ್ಷವಾಗಿ ಸಂವಿಧಾನದ ತತ್ವಗಳು ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಸಲುವಾಗಿ ಸ್ಥಳೀಯ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದೆವು ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ರಾಷ್ಟ್ರೀಯ ಪಕ್ಷವಾಗಿ ಸಂವಿಧಾನದ ತತ್ವಗಳು ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಸಲುವಾಗಿ ಸ್ಥಳೀಯ ಪಕ್ಷ ಜೆಡಿಎಸ್'ನ್ನು ಬೆಂಬಲಿಸಿದ್ದೇವೆ. ಕೊಡುವುದು ಹಾಗೂ ತೆಗೆದುಕೊಳ್ಳುವುದು ಇದ್ದೇ ಇರುತ್ತದೆ. ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡೇ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ. ಮುಂದಿನ ನಿರ್ಧಾರನಗಳೇನೇ ಇದ್ದರೂ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ವಿಶ್ವಾಸಮತಯಾಚಿಸುವಲ್ಲಿ ವಿಫಲರಾದ ಬಿ.ಎಸ್.ಯಡಿಯೂರಪ್ಪ ಅವರು ನಿನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ಸರ್ಕಾರ ರಚನೆ ಮಾಡುವಂತೆ ಆಹ್ವಾನ ನೀಡಿದ್ದಾರೆ.
ಇದರಂತೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿಂದೆ 2013ರಲ್ಲಿ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಅವರು ಇದೇ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSMallikarjun khargeಜೆಡಿಎಸ್ಮಲ್ಲಿಕಾರ್ಜುನ ಖರ್ಗೆKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


