ಬಹುಮತ ಸಾಬೀತಿಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ: ಡಿವಿ ಸದಾನಂದಗೌಡ
ಹಾಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಅಥವಾ ಬಹುಮತ ಸಾಬೀತಿಗೂ ಮುನ್ನವೇ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.

Published On :
ಮಂಡ್ಯ: ಹಾಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಅಥವಾ ಬಹುಮತ ಸಾಬೀತಿಗೂ ಮುನ್ನವೇ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಆಯಸ್ಸು ಕೇವಲ 3 ತಿಂಗಳ ಮಾತ್ರ.. ಅಥವಾ ಅದಕ್ಕೂ ಮುನ್ನವೇ ಅಂದರೆ ಬಹುಮತ ಸಾಬೀತಿಗೂ ಮುನ್ನವೇ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
'ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಹಾವು ಮುಂಗಿಸಿಯಂತಿದ್ದವರು. ಅಧಿಕಾರಕ್ಕಾಗಿ ಈಗ ಒಂದಾಗಿದ್ದಾರೆ. ಕಾಂಗ್ರೆಸ್ ಜತೆ ಜೆಡಿಎಸ್ ಹೋಗಲ್ಲ ಎಂದು ಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡಲಿಲ್ಲ ಎಂದರು.
ಅಂತೆಯೇ 'ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್ ನವರು ಬಿಜೆಪಿಗೆ ನೀಡಿದ್ದ ಜನಾದೇಶವನ್ನು ಧಿಕ್ಕರಿಸಿದ್ದಾರೆ. ಈಗ ನಾವು ವಿಫಲರಾಗಿರಬಹುದು. ಆದರೆ ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತೇವೆ' ಎಂದರು.
ಶಾಸಕರಿಗೆ ಆಮಿಷ ಒಡ್ಡಿದ ಆರೋಪಗಳ ಆಡಿಯೋ ಫೇಕ್
ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಸುಳ್ಳು. ಆಡಿಯೋ, ವೀಡಿಯೋಗಳ ಬಗ್ಗೆ ತನಿಖೆ ನಡೆಯಲಿ. ಎಲ್ಲವೂ ಫೇಕ್. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressJDSPoliticsರಾಜಕೀಯDV Sadananda Gowdaಜೆಡಿಎಸ್ಮಂಡ್ಯMandyaಡಿವಿ ಸದಾನಂದಗೌಡKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


