ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಪಟ್ಟ ನೀಡಿ: ವೀರಶೈವ ಮಹಾಸಭಾ ಆಗ್ರಹ
ಹಿರಿಯ ಕಾಂಗ್ರೆಸ್ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ನೂತನವಾಗಿ ರಚನೆಯಾಗಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ .....

Published On :
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ನೂತನವಾಗಿ ರಚನೆಯಾಗಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯ ಕೇಳಿಬಂದಿದೆ.
ರಾಜ್ಯದ ವೀರಶೈವ ಮಹಾಸಭಾ ಬೆಂಗಳೂರು ಘಟಕವು ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದೆ.
ಬಿಜೆಪಿ ಅಲೆಯ ಹೊರತಾಗಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಒಟ್ಟು 20 ಲಿಂಗಾಯತ, ವೀರಶೈವ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಬೇರೆಲ್ಲಾ ಸಮುದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಿಂಗಾಯತ-ವೀರಶೈವ ಶಾಸಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಿಂದ ಒಟ್ಟು 16 ಲಿಂಗಾಯತ-ವೀರಶೈವ ಶಾಸಕರು ಆಯ್ಕೆಗೊಂಡರೆ ಜೆಡಿಎಸ್ ನಿಂದ ನಾಲ್ವರು ಚುನಾಯಿತರಾಗಿದ್ದಾರೆ.

ಇದೀಗ ಮೈತ್ರಿಕೂಟದ ಸರ್ಕಾರಕ್ಕೆ ಲಿಂಗಾಯತ ಸಮುದಾಯದ ಬೆಂಬಲ ಗಟ್ಟಿಯಾಗಿದೆ.ಹೀಗಾಗಿ ಈ ಸಮುದಾಯಕ್ಕೆ ಸೇರಿದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರನ್ನೇ ಉಪ ಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು. ಒಟ್ಟು ಐವರು ಶಾಸಕರನ್ನು ಮಂತ್ರಿ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ಘಟಕ ಅಧ್ಯಕ್ಷ ಕೇಶವಕುಮಾರ್ ಪತ್ರದಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DCMವೀರಶೈವ ಮಹಾಸಭಾShamanur shivashankarappaಶಾಮನೂರು ಶಿವಶಂಕರಪ್ಪಡಿಸಿಎಂKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆVeerashiva Mahasabha
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


