ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಶಾಸಕರ ಖರೀದಿ ಪ್ರಕರಣ ತನಿಖೆಗೆ: ರಾಮಲಿಂಗಾ ರೆಡ್ಡಿ
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಶಾಸಕರ ಖರೀದಿ ಪ್ರಕರಣ ತನಿಖೆ ನಡೆಸುವಂತೆ ಮನವಿ...

Published On :
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಶಾಸಕರ ಖರೀದಿ ಪ್ರಕರಣ ತನಿಖೆ ನಡೆಸುವಂತೆ ಮನವಿ ಮಾಡುವುದಾಗಿ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಆಪರೇಷನ್ ಕಮಲಕ್ಕೆ ಯತ್ನಿಸಿದ ಬಿಜೆಪಿ ನಾಯಕರ ಆಡಿಯೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಆದರೆ ಆಪರೇಷನ್ ಕಮಲದ ಆಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಬಿಜೆಪಿಯವರು ಏನು ಸತ್ಯ ಹರಿಶ್ಚಂದ್ರರಾ ಎಂದು ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.
2008ರಿಂದ 13ರವರೆಗೆ ಬಿಜೆಪಿ ಏನು ಮಾಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆಗ ಕೊಳ್ಳೆ ಹೊಡೆದ ದುಡ್ಡಲ್ಲಿ ಈಗ ಶಾಸಕರ ಖರೀದಿ ಮಾಡಲು ಮುಂದಾಗಿದ್ದಾರಾ? ಅಥವಾ ದೆಹಲಿಯಿಂದ ಹಣ ಬರುತ್ತಾ ಇದೆಯ ಎಂದು ಪ್ರಶ್ನಿಸಿದರು.
ಶಾಸಕರ ಖರೀದಿ ಕುರಿತು ಬಹಿರಂಗಗೊಂಡಿರುವ ಆಡಿಯೋ ನಕಲಿ ಅಲ್ಲ ಅಸಲಿ. ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಕೂಡಲೇ ತನಿಖೆ ನಡೆಸುವಂತೆ ಮನವಿ ಮಾಡತ್ತೇನೆ. ಈ ಬಗ್ಗೆ ಸಿಎಂಗೆ ಪತ್ರವನ್ನು ಬರೆಯುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿRamalinga Reddyರಾಮಲಿಂಗಾ ರೆಡ್ಡಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


