ರಾಜಕೀಯ

ವಿವಿಪ್ಯಾಟ್ ಪ್ರಕರಣ: ತನಿಖೆ ನಡೆಸುವಂತೆ ಆಯೋಗಕ್ಕೆ ಬಿಎಸ್'ವೈ ಪತ್ರ

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ವಿವಿಪ್ಯಾಟ್ ಪತ್ತೆಯಾಗಿರುವ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆ...

ವಿವಿಪ್ಯಾಟ್ ಪ್ರಕರಣ: ತನಿಖೆ ನಡೆಸುವಂತೆ ಆಯೋಗಕ್ಕೆ ಬಿಎಸ್'ವೈ ಪತ್ರ
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ
Published On :
ಬೆಂಗಳೂರು: ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ವಿವಿಪ್ಯಾಟ್ ಪತ್ತೆಯಾಗಿರುವ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆ. 
ಬಸವನ ಬಾಗೇವಾಡಿಯಲ್ಲಿ ವಿವಿಪ್ಯಾಟ್ ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದರೆ ವಿಧಾನಸಭಾ ಚುನಾವಣೆ ವೇಳೆ ಹಲವು ಕ್ಷೇತ್ರಗಳಲ್ಲಿ ನಡೆದಿದ್ದ ಅಕ್ರಮಗಳು ಹೊರಬರಲಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 
ಮನಗೂಳಿಯಲ್ಲಿ ಪತ್ತೆಯಾದ ವಿವಿಪ್ಯಾಟ್ ಪೆಟ್ಟಿಗೆಗಳು ಆಯೋಗಕ್ಕೆ ಸೇರಿದ್ದಲ್ಲ; ಸಂಜೀವ್ ಕುಮಾರ್
ಚುನಾವಣಾ ಪ್ರಕ್ರಿಯೆ ಆರಂಭವಾದ ಬಳಿಕ ಕೆಲ ವ್ಯಕ್ತಿಗಳು ಚುನಾವಣಾ ವ್ಯವಸ್ಥೆಯನ್ನು ಹಾಳು ಮಾಡಲು ಯತ್ನ ನಡೆಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಹೇಳಿದ್ದಾರೆ. 
ವಿಜಯಪುರ ಜಿಲ್ಲೆ ಬಸವನಹಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ದೊರೆತಿರುವುದು ವಿವಿಪ್ಯಾಟ್'ನ ಕಾಲಿ ಪೆಟ್ಟಿಗೆಗಳಾಗಿವೆ. ಚುನಾವಣಾ ಆಯೋಗಕ್ಕೆ ಸಂಬಂಧಪಟ್ಟಿದ್ದಲ್ಲ. ಆದರೂ ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಈ ಹಿಂಗೆ ಬಾಗಲಕೋಟೆಯಲ್ಲಿ ಇವಿಎಂ ತುಂಡಾಗಿರುವುದು ಪತ್ತೆಯಾಗಿತ್ತು. ಬಳಿಕ ಬಾದಾಮಿಯಲ್ಲಿ ಬ್ಯಾಲೆಟ್ ಪೇಪರ್ ಗಳು ಲಭ್ಯವಾಗಿದ್ದವು. ಇದೀಗ ವಿವಿಪ್ಯಾಟ್'ನ ಖಾಲಿ ಪೆಟ್ಟಿಗೆಗಳು ಸಿಕ್ಕಿವೆ. ಈ ಎಲ್ಲಾ ಘಟನೆಗಳು ಒಂದೇ ಭಾಗದಲ್ಲಿ ನಡೆಯುತ್ತಿರುವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ. ಚುನಾವಣಾ ವ್ಯವಸ್ಥೆಯನ್ನ ಅಸ್ತವ್ಯಸ್ತಗೊಳಿಸಲು ಯತ್ನಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.