ರಾಜಕೀಯ

ಜಯನಗರ ಚುನಾವಣೆ: ಪ್ರಹ್ಲಾದ್ ಬಾಬು ಬಿಜೆಪಿ ಅಭ್ಯರ್ಥಿ

ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ....

ಜಯನಗರ ಚುನಾವಣೆ: ಪ್ರಹ್ಲಾದ್ ಬಾಬು ಬಿಜೆಪಿ ಅಭ್ಯರ್ಥಿ
ಪ್ರಹ್ಲಾದ್ ಬಾಬು
Published On :
ಬೆಂಗಳೂರು: ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ನಿಗದಿಯಾಗಿದ್ದು, ಬಿಜೆಪಿಯಿಂದ ವಿಜಯ್ ಕುಮಾರ್ ಅವರ ಸೋದರ ಪ್ರಹ್ಲಾದ್ ಬಾಬು ಅವರು ಸ್ಪರ್ಧಿಸಲಿದ್ದಾರೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಪ್ರಹ್ಲಾದ್ ಬಾಬು ಅವರು ಕಣಕ್ಕಿಳಿಯಲಿದ್ದಾರೆ.  
ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದರೆ ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ.
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಮತದಾನ ನಡೆಯಲಿದ್ದು,  ಜೂನ್ 13ಕ್ಕೆ ಮತ ಎಣಿಕೆ ನಡೆಯಲಿದೆ. 
ಪ್ರಚಾರ ಮಾಡುವ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾಗಿ ಜಯನಗರ ಶಾಸಕ ಬಿ.ಎನ್.ವಿಜಯ್ ಕುಮಾರ್ ಮೃತಪಟ್ಟ ಕಾರಣ ಚುನಾವಣೆ ರದ್ದುಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.