ರಾಜಕೀಯ

ನಾಳೆ ನನ್ನ ಜೊತೆ ಇನ್ನೂ ಕೆಲವರು ಪ್ರಮಾಣವಚನ ಸ್ವೀಕಾರ-ಹೆಚ್ ಡಿ ಕುಮಾರಸ್ವಾಮಿ

ಕರ್ನಾಟಕ ಸರ್ಕಾರದ 25ನೇ ಮುಖ್ಯಮಂತ್ರಿಯಾಗಿ ನಾಳೆ ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ...

ನಾಳೆ ನನ್ನ ಜೊತೆ ಇನ್ನೂ ಕೆಲವರು ಪ್ರಮಾಣವಚನ ಸ್ವೀಕಾರ-ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಕರ್ನಾಟಕ ಸರ್ಕಾರದ 25ನೇ ಮುಖ್ಯಮಂತ್ರಿಯಾಗಿ ನಾಳೆ ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಜೊತೆ ಇನ್ನೂ ಕೆಲವು ಹಿರಿಯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಹೀಗೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆ ಮತ್ತು ಖಾತೆ ಹಂಚಿಕೆ ಕುರಿತು ಇಂದು ಸಂಜೆ ತೀರ್ಮಾನ ಮಾಡಲಾಗುವುದು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಈಗಾಗಲೇ ಕೆಲವು ಖಾತೆಗಳು ಎರಡೂ ಪಕ್ಷಗಳ ಕೆಲವು ಹಿರಿಯ ಶಾಸಕರಿಗೆ ನೀಡುವುದು ಖಚಿತವಾಗಿದ್ದು ಅವರು ನಾಳೆ ಹೆಚ್ ಡಿ ಕುಮಾರಸ್ವಾಮಿಯವರ ಜೊತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.