ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಾಟಾಳ್ ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆ ನಂತರ ಈಗ ವಿಧಾನ ಪರಿಷತ್ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಕನ್ನಡ ಚಳುವಳಿ ವಾಟಾಳ್....

ವಿಧಾನ ಪರಿಷತ್ ಚುನಾವಣೆ: ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಾಟಾಳ್ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಸುತ್ತಿರುವ ವಾಟಾಳ್
Published On :
ಕಲಬುರ್ಗಿ: ವಿಧಾನಸಭೆ ಚುನಾವಣೆ ನಂತರ ಈಗ ವಿಧಾನ ಪರಿಷತ್ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮಂಗಳವಾರ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.  
ವಾಟಾಳ್ ನಾಗರಾಜ್ ಅವರು ಇಂದು ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. 
ಹಿರಿಯ ನಿರ್ಮಾಪಕ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಕನ್ನಡ ಸೇನೆ ಅಧ್ಯಕ್ಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು ವಾಟಾಳ್ ಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್, ಸಮಗ್ರ ಕರ್ನಾಟಕದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕನ್ನಡ ನಾಡಿನಾದ್ಯಂತ ಹೋರಾಟ ಮಾಡುತ್ತಿದ್ದೇವೆ. ಹೈದರಾಬಾದ್ ಕರ್ನಾಟಕ ಭಾಗ ತೀರಾ ಹಿಂದುಳಿದಿದ್ದು, ಹೆಚ್ಚು ಪ್ರಗತಿಯನ್ನು ಕಾಣಬೇಕಿದೆ. ಈ ನಿಟ್ಟಿನಲ್ಲಿ ಹಿಂದುಳಿದ ಭಾಗದವರ ಧ್ವನಿಯಾಗಬೇಕೆಂಬ ದೃಷ್ಟಿಯಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದರೆ ವಿಧಾನ ಪರಿಷತ್ ನಲ್ಲಿ ಈ ಭಾಗದ ಧ್ವನಿಯಾಗಿ ಮಾತನಾಡುತ್ತೇನೆ. ಸೋತರೂ ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಹೋರಾಟ ಮಾಡುತ್ತೇನೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.