ರಾಜಕೀಯ

ಸಂಪುಟ ರಚನೆಯಲ್ಲಿ ತಮ್ಮ ಹಸ್ತಕ್ಷೇಪವಿಲ್ಲ, ಸ್ಥಿರ ಸರ್ಕಾರವೇ ನಮ್ಮ ಉದ್ದೇಶ: ಎಚ್ ಡಿ ದೇವೇಗೌಡ

ಸರ್ಕಾರದ ಸಂಪುಟ ರಚನೆಯಲ್ಲಿ ತಾವು ಹಸ್ತಕ್ಷೇಪ ಮಾಡಿಲ್ಲ, ಯಾವುದೇ ನಾಯಕರ ಮಂತ್ರಿಗಿರಿಗೂ ತಾವಾಗಲೂ, ತಮ್ಮಪಕ್ಷವಾಗಲಿ ವಿರೋಧ ವ್ಯಕ್ತಪಡಿಸಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಸಂಪುಟ ರಚನೆಯಲ್ಲಿ ತಮ್ಮ ಹಸ್ತಕ್ಷೇಪವಿಲ್ಲ, ಸ್ಥಿರ ಸರ್ಕಾರವೇ ನಮ್ಮ ಉದ್ದೇಶ: ಎಚ್ ಡಿ ದೇವೇಗೌಡ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರ
Published On :
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ರಚನೆಯಲ್ಲಿ ತಾವು ಹಸ್ತಕ್ಷೇಪ ಮಾಡಿಲ್ಲ, ಯಾವುದೇ ನಾಯಕರ ಮಂತ್ರಿಗಿರಿಗೂ ತಾವಾಗಲೂ, ತಮ್ಮಪಕ್ಷವಾಗಲಿ ವಿರೋಧ ವ್ಯಕ್ತಪಡಿಸಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಎಂಬಿ ಪಾಟೀಲ್ ಮಂತ್ರಿ ಸ್ಥಾನಕ್ಕೆ ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಸುದ್ದಿಗಳ ಕುರಿತು ಪ್ರತಿಕ್ರಿಯೆ ನೀಡಿದರು. 'ರಾಜ್ಯದಲ್ಲಿ ಸ್ಥಿರ ಸರ್ಕಾರ ಮಾತ್ರವೇ ನಮ್ಮ ಉದ್ದೇಶ. ಈ ಕುರಿತು ನಾವು ನಿರ್ಧಾರಗಳನ್ನು ಕೈಗೊಳ್ಳುತ್ತೇವೆ. ಆದರೆ ಯಾರಿಗೆ ಮಂತ್ರಿ ಸ್ಥಾನ ದೊರೆಯಬೇಕು ಎಂಬುದು ನಮ್ಮ ಕೆಲಸವಲ್ಲ. ಅದನ್ನು ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಹೇಳಿದರು.
ಇದೇ ವೇಳೆ ತಾವು ಯಾವುದೇ ಅಧಿಕಾರಿಗಳೊಂದಿಗೆ ಆಡಳಿತದ ಕುರಿತು ಚರ್ಚಿಸಿಲ್ಲ. ಆದರೆ ಅಧಿಕಾರಿಗಳು ಹೂಗುಚ್ಚ ನೀಡಿ ಶುಭಕೋರಿದರೆ, ಅದನ್ನು ರಾಜಕೀಯ ಮಾಡಬಾರದು ಎಂದು ಎಚ್ ಡಿ ದೇವೇಗೌಡ ಹೇಳಿದರು. 
ಇತ್ತೀಚೆಗಷ್ಟೇ ಎಚ್ ಡಿ ದೇವೇಗೌಡ ಅವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ನೀಲಮಣಿ ರಾಜು ಅವರನ್ನು ಭೇಟಿ ಮಾಡಿದ್ದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಂತೆಯೇ ಈ ಹಿಂದೆ ಸಿಎಂ ಆಗಿದ್ದ ಸಂದರ್ಭಲ್ಲಿ ಬಿಎಸ್ ಯಡಿಯೂರಪ್ಪ ಅವರು ಮಾಡಿದ್ದ ಆಡಳಿತಾತ್ಮಕ ನಿರ್ಧಾರ ಹಿಂತೆಗೆತೆದ ಹಿಂದೆ ದೇವೇಗೌಡರ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ.
ಅಂತೆಯೇ ಎಂಬಿ ಪಾಟೀಲ್ ಮಂತ್ರಿ ಸ್ಥಾನಕ್ಕೂ ಜೆಡಿಎಸ್ ವಿರೋಧ ಮಾಡಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಶೃಂಗೇರಿಗೆ ತೆರಳುತ್ತಿದ್ದು, ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಅವರೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.