ರಾಜಕೀಯ

ಯಾರೂ ಅತೃಪ್ತಿ ಹೊಂದಿಲ್ಲ, ನಾವೆಲ್ಲರೂ ಒಟ್ಟಿಗೆ ಇದ್ದೇವೆ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡ ಅಸಮಾಧಾನ ಅಥವಾ ಅತೃಪ್ತಿಗೊಂಡಿಲ್ಲ. ನಾವೆಲ್ಲರೂ ...

ಯಾರೂ ಅತೃಪ್ತಿ ಹೊಂದಿಲ್ಲ, ನಾವೆಲ್ಲರೂ ಒಟ್ಟಿಗೆ ಇದ್ದೇವೆ: ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Published On :

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡ ಅಸಮಾಧಾನ ಅಥವಾ ಅತೃಪ್ತಿಗೊಂಡಿಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ತಮಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದ್ದಕ್ಕಾಗಿ ಡಿ.ಕೆ.ಸೋದರರು ಅಸಮಾಧಾನ ಹೊರಹಾಕಿದ್ದಾರೆ, ಈ ಕುರಿತು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಬಳಿ ಪ್ರಸ್ತಾಪಿಸಲಿದ್ದಾರೆ ಎಂಬ ಸುದ್ದಿ ಇಂದು ಬೆಳಗ್ಗೆಯಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು.

ಈ ಕುರಿತು ಸ್ಪಷ್ಟನೆ ನೀಡಿರುವ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಖುಷಿಯಲ್ಲಿ ನಾವಿದ್ದೇವೆ. ಈ ಸಂಭ್ರಮದ ಆಚರಣೆಯಲ್ಲಿ ಇಂದು ನಾವೆಲ್ಲರೂ ಇದ್ದೇವೆ. ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ ಎಂದು ನಾನೆಂದೂ ಹೇಳಿಕೊಂಡಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.