ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿನಂದನೆ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

>ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಟ್ವೀಟರ್ ಮೂಲಕ ನರೇಂದ್ರಮೋದಿ ಶುಭ ಹಾರೈಸಿದ್ದಾರೆ.
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಹೆಚ್. ಡಿ. ಕುಮಾರಸ್ವಾಮಿ ಇಂದು ಪದಗ್ರಹಣ ಮಾಡಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಹಾಗೂ ವಿವಿಧ ಪ್ರಾದೇಶಿಕ ಪಕ್ಷಗಳ ನಾಯಕರು ಭಾಗವಹಿಸುವ ಮೂಲಕ ಬಿಜೆಪಿಗೆ ಸ್ಪಷ್ಪ ಸಂದೇಶ ರವಾನಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎಗೆ ಪರ್ಯಾಯವಾದ ಮೈತ್ರಿ ಕೂಟ ರಚನೆಯ ಸಂದೇಶವನ್ನು ಸಹ ಈ ನಾಯಕರು ದೇಶದ ಜನತೆಗೆ ತಲುಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


