ಮೈತ್ರಿ ಸರ್ಕಾರ ನಡೆಸುವುದು ದೊಡ್ಡ ಸವಾಲು; ಹೆಚ್.ಡಿ.ಕುಮಾರಸ್ವಾಮಿ
ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಮುನ್ನಡೆಸುವುದು ದೊಡ್ಡ ಸವಾಲಿನ ಕೆಲಸ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

Published On :
ಬೆಂಗಳೂರು; ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಮುನ್ನಡೆಸುವುದು ದೊಡ್ಡ ಸವಾಲಿನ ಕೆಲಸ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಪ್ರಮಾಣವಚನ ಸ್ವೀಕಾರದ ಹಿಂದಿನ ದಿನವಾದ ಮಂಗಳವಾರ ಸಂಜೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,
5 ವರ್ಷಗಳ ಕಾಲ ಮೈತ್ರಿ ಸರ್ಕಾರ ನಡೆಸುವುದು ನನ್ನ ಜೀವನದಲ್ಲಿಯೇ ದೊಡ್ಡ ಸವಾಲಿನ ಸಂಗತಿ. ಮುಖ್ಯಮಂತ್ರಿಯಾಗಿ ಸುಲಭವಾಗಿ ನನ್ನ ಜವಾಬ್ದಾರಿಗಳನ್ನು ನಿಭಾಯಿಸಬಹುದು ಎಂದು ನಾನು ಭಾವಿಸುತ್ತಿಲ್ಲ ಎಂದು ಹೇಳಿದ್ದಾರೆ.
ಜನರಲ್ಲಿ ಸಾಕಷ್ಟು ಸಂಶಯಗಳಿವೆ. ಕೇವಲ ನನ್ನ ಮೇಲಷ್ಟೇ ಅಲ್ಲ, ಸರ್ಕಾರ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆಯೋ, ಇಲ್ಲವೋ ಎಂಬುದ ಬಗ್ಗೆ ಜನರಿಗೆ ಸಂಶಯಗಳಿವೆ. ಶಾರದಾಂಬೆ ಹಾಗೂ ಶೃಂಗೇರಿ ಜಗದ್ಗುರು (ಶಂಕರಾಚಾರ್ಯ) ಆಶೀರ್ವಾದ ನನ್ನ ಮೇಲಿದ್ದು, ಸರ್ಕಾರ ಸರಾಗವಾಗಿ ಅಧಿಕಾರ ನಡೆಸಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSಜೆಡಿಎಸ್ಮೈತ್ರಿ ಸರ್ಕಾರcoalition governmentಹೆಚ್.ಡಿ.ಕುಮಾರಸ್ವಾಮಿHD. KumaraswamyKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


