ರಾಜಕೀಯ

ಬಿಜೆಪಿ ಇವಿಎಂಗಳನ್ನು ತಿರುಚಿತ್ತು: ಡಿಸಿಎಂ ಪರಮೇಶ್ವರ ಗಂಭೀರ ಆರೋಪ

ಮೇ.23 ರಂದು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಜಿ ಪರಮೆಶ್ವರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಯಂತ್ರಗಳನ್ನು ತಿರುಚಿತ್ತು...

ಬಿಜೆಪಿ ಇವಿಎಂಗಳನ್ನು ತಿರುಚಿತ್ತು: ಡಿಸಿಎಂ ಪರಮೇಶ್ವರ ಗಂಭೀರ ಆರೋಪ
ಡಾ.ಜಿ ಪರಮೆಶ್ವರ್
Published On :
ಬೆಂಗಳೂರು: ಮೇ.23 ರಂದು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಜಿ ಪರಮೆಶ್ವರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಯಂತ್ರಗಳನ್ನು ತಿರುಚಿತ್ತು ಎಂದು ಹೇಳಿದ್ದಾರೆ. 
ಪತ್ರಕರ್ತರೊಂದಿಗೆ ಮಾತನಾಡಿರುವ ಪರಮೇಶ್ವರ್, ನನಗೆ  ಹಾಗೂ ನಮ್ಮ ಕೆಲವು ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಯಂತ್ರಗಳನ್ನು ತಿರುಚಿದೆ ಎನಿಸುತ್ತಿದೆ. ಕಾಂಗ್ರೆಸ್ ಬಲಿಷ್ಠವಾಗಿರುವ ಪ್ರದೇಶಗಳಲ್ಲಿಯೂ ಸೋತಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ, ಬ್ಯಾಲೆಟ್ ಪೇಪರ್ ನ್ನು ಪುನಃ ಬಳಕೆ ಮಾಡುವಂತೆ ಒತ್ತಾಯಿಸುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ರಾಜರಾಜೇಶ್ವರಿ ನಗರ ಚುನಾವಣೆಗೆ ಸಂಬಂಧಿಸಿದಂತೆಯೂ ಮಾತನಾಡಿರುವ ಪರಮೆಶ್ವರ್,  ರಾಜರಾಜೆಶ್ವರಿ ನಗರದಲ್ಲಿ ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.