ರಾಜಕೀಯ

ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧ ಆಯ್ಕೆ ಮಾಡಿದೆವು; ಬಿ.ಎಸ್.ಯಡಿಯೂರಪ್ಪ

ಸಭಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದನ್ನು ನೋಡಿದ್ದೇವೆ. ನಿಮ್ಮಂತಹ ಹಿರಿಯ ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧವಾಗಿ ಆಯ್ಕೆ ಮಾಡಿದೆವೆಂದು ವಿಧಾಸಭೆ ಸ್ಪೀಕರ್ ಆಗಿ ಆಯ್ಕೆಯಾಗಿರುವ ರಮೇಶ್ ಕುಮಾರ್...

ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧ ಆಯ್ಕೆ ಮಾಡಿದೆವು; ಬಿ.ಎಸ್.ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
Published On :
ಬೆಂಗಳೂರು: ಸಭಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದನ್ನು ನೋಡಿದ್ದೇವೆ. ನಿಮ್ಮಂತಹ ಹಿರಿಯ ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧವಾಗಿ ಆಯ್ಕೆ ಮಾಡಿದೆವೆಂದು ವಿಧಾಸಭೆ ಸ್ಪೀಕರ್ ಆಗಿ ಆಯ್ಕೆಯಾಗಿರುವ ರಮೇಶ್ ಕುಮಾರ್ ಅವರ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 
ವಿಧಾನಸಭೆಯಲ್ಲಿ ಮಾತನಾಡಿರುವಅವರು, 1994ರಿಂದ 1999ರವರೆಗೆ 5 ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ಸಭಾಧ್ಯಕ್ಷರಾಗಿ ನೀವು ಕಾರ್ಯನಿರ್ವಹಿಸಿದ್ದನ್ನು ನಾವು ನೋಡಿದ್ದೇವೆ. ನಿಮ್ಮಂತಹ ಹಿರಿಯರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕೆಂಬ ಕಾರಣಕ್ಕೆ ಹಾಗೂ ಗೌರವ ನೀಡಿರುವ ಸಲುವಾಗಿ ಸುರೇಶ್ ಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಸೂಚಿಸಿ, ನಿಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದೆವು ಎಂದು ಹೇಳಿದ್ದಾರೆ. 
ನೀವು ಸರಳ ಹಾಗೂ ನಿಷ್ಠುರ ವ್ಯಕ್ತಿ. ಆ ಸ್ಥಾನದಲ್ಲಿ ಕುಳಿತ ಮೇಲೆ ಯಾವುದೇ ಪೂರ್ವಾಗ್ರಹವಿಲ್ಲದೆ ಅತ್ಯಂತ ಪಾರದರ್ಶಕವಾಗಿ ನಿರ್ಧಾರ ತೆಗೆದುಕೊಳ್ಳುತ್ತೀರೆಂಬ ವಿಶ್ವಾಸವಿದೆ. ಈಗಾಗಲೇ ಆಯ್ಕೆಯಾಗಿರುವ ಹೊಸ ಶಾಸಕರಿಗೆ ಹೆಚ್ಚು ಅವಕಾಶ ನೀಡಿ, ಮಾರ್ಗದರ್ಶನ ನೀಡುತ್ತೀರೆಂದು ಭಾವಿಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.