ಹಿಂದಿನ ಸರ್ಕಾರದ ಹಗರಣಗಳ ಕುರಿತು ಆರೋಪ ಮಾಡಿ ಸಮಯ ವ್ಯರ್ಥ ಮಾಡಲ್ಲ: ಸಿಎಂ ಹೆಚ್'ಡಿಕೆ
ಹಿಂದಿನ ಸರ್ಕಾರದ ಹಗರಣಗಳ ಕುರಿತು ಆರೋಪಗಳನ್ನು ಮಾಡುತ್ತಾ ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

Published On :
ತುಮಕೂರು: ಹಿಂದಿನ ಸರ್ಕಾರದ ಹಗರಣಗಳ ಕುರಿತು ಆರೋಪಗಳನ್ನು ಮಾಡುತ್ತಾ ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದಿನ ಸರ್ಕಾರಗಳು ಮಾಡಿದ್ದ ಹಗರಣಗಳ ಕುರಿತು ಆರೋಪಗಳನ್ನು ಮಾಡುತ್ತಾ ಸಮಯ ವ್ಯರ್ಥ ಮಾಡುವುದಿಲ್ಲ. ಪ್ರಸ್ತುತ ಆಡಳಿತಾರೂಢ ಸರ್ಕಾರ ಮಾಡಬೇಕಿರು ಅಭಿವೃದ್ಧಿ ಕಾರ್ಯಗಳ ಕುರಿತು ಗಮನ ಹರಿಸುತ್ತೇನೆಂದು ಹೇಳಿದ್ದಾರೆ.
2006ರಲ್ಲಿ 20 ತಿಂಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದೆ. ರಾಜ್ಯವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಯತ್ತ ಕೊಂಡೊಯ್ದಿದ್ದೆ. ಸಂದಿಗ್ಧ ಪರಿಸ್ಥಿತಿಯಲ್ಲೂ ಪಕ್ಷವನ್ನು ರಕ್ಷಣೆ ಮಾಡಿದ್ದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಒಪ್ಪಿಗೆ ನೀಡಿದ್ದು ರಾಜ್ಯದ ಒಳಿತಿಗಾಗಿಯೇ ವಿನಃ ವೈಯಕ್ತಿಕವಾಗಿ ನನ್ನ ಆಸೆ, ಆಕಾಂಕ್ಷೆಗಳಿಗಲ್ಲ. ಮುಖ್ಯಮಂತ್ರಿಯಾಗಿ ಮೆರೆಯೋದಕ್ಕಾಗಲೀ, ಅಟ್ಟಹಾಸ ಮಾಡುವುದಕ್ಕಾಗಲಿ ಈ ಪದವಿ ಸ್ವೀಕರಿಸಿಲ್ಲ. ಈ ಬಗ್ಗೆ ಯಾರೂ ಅನ್ಯತಾ ಭಾವಿಸುವುದು ಬೇಡ ಎಂದು ತಿಳಿಸಿದ್ದಾರೆ.
ವಿಶ್ವಾಸಮತಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ದೊಡ್ಡ ನಿರ್ಧಾರಕ್ಕೆ ನಾನು ಕೈ ಹಾಕುವುದಿಲ್ಲ. ಶುಕ್ರವಾರ ವಿಶ್ವಾಸಮತಯಾಚನೆಯನ್ನು ಎದುರಿಸುತ್ತೇನೆ. ಇದಾದ ಬಳಿಕ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇನೆಂದಿದ್ದಾರೆ.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ತಾಯಿ ಚೆನ್ನಮ್ಮ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅವರೆಲ್ಲಾ ರಾಜಕಾರಣದಲ್ಲಿ ಇರುವವರಲ್ಲ. ಆದ್ದರಿಂದ ಅವರ ಪ್ರತಿಕ್ರಿಯೆಗಳಿಗೆ ಮಹತ್ವ ಕೊಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಹಲವಾರು ರೀತಿಯ ಪರ ಹಾಗೂ ವಿರೋಧ ಟೀಕೆಗಳು ಬರುವುದು ಸಹಜ. ಚುನಾವಣೆ ನಂತರ ನಮ್ಮ ಭಾವನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿರಬೇಕು. ಅವೆಲ್ಲಾ ಮುಗಿದು ಹೋಗಿರುವ ಅಧ್ಯಾಯ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆರೋಪallegationಹೆಚ್.ಡಿ.ಕುಮಾರಸ್ವಾಮಿHD. KumaraswamyKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆGovenment scamಸರ್ಕಾರ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


