ಮುಳುಗುತ್ತಿದ್ದ ಪಕ್ಷವನ್ನು ಉಳಿಸಿದ್ದೇ ನಾವು: ಎಚ್‌ಡಿಕೆಗೆ ಶ್ರೀರಾಮುಲು ಟಾಂಗ್
ಬಿಜೆಪಿ ಬೆಳೆಯಲು ನಾನು ಕಾರಣ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಶ್ರೀರಾಮುಲು ಮುಳುಗುತ್ತಿದ್ದ ಪಕ್ಷವನ್ನು ಉಳಿಸಿದ್ದೇ ನಾವು ಎಂದು ಹೇಳಿದ್ದಾರೆ...

Published On :
ನಾಯಕನಹಟ್ಟಿ(ಚಿತ್ರದುರ್ಗ): ಬಿಜೆಪಿ ಬೆಳೆಯಲು ನಾನು ಕಾರಣ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಶ್ರೀರಾಮುಲು ಮುಳುಗುತ್ತಿದ್ದ ಪಕ್ಷವನ್ನು ಉಳಿಸಿದ್ದೇ ನಾವು ಎಂದು ಹೇಳಿದ್ದಾರೆ.
ವಿಶ್ವಾಸಮತ ಯಾಚನೆ ವೇಳೆ ವಿಧಾನಸಭೆಯಲ್ಲಿ ಬಿಜೆಪಿ ಬೆಳೆಯಲು ನಾನು ಕಾರಣ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮುಲು ಜೆಡಿಎಸ್ ಮುಳುಗುತ್ತಿದ್ದ ಸಮಯದಲ್ಲಿ ನಾವು ಆ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದೇವೆ. ನಮ್ಮ ಪಕ್ಷ ಬೆಂಬಲ ನೀಡದಿದ್ದರೆ ಅಂದು ಅವರು ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕುಟುಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಅಂಟಿಕೊಂಡಿಲ್ಲ. ಅತಿ ಹೆಚ್ಚು 104 ಸ್ಥಾನಗಳನ್ನು ಪಡೆದಿದ್ದೇವೆ. ಹೀಗಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ. ನಾವು ಪ್ರತಿಪಕ್ಷದಲ್ಲಿ ಕುಳಿತು ಜನರ ಪರವಾಗಿ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.
ತೃತೀಯ ರಂಗದ ಮುಖಂಡರು ಅಧಿಕಾರ ಸಿಗುವ ಸಂದರ್ಭದಲ್ಲಿ ಮಾತ್ರ ಜತೆಗೆ ಇರುತ್ತಾರೆ. ಅಧಿಕಾರ ದೊರೆಯುವುದಿಲ್ಲ ಎಂದು ಖಾತ್ರಿಯಾದ ತಕ್ಷಣ ಜಾಗ ಖಾಲಿ ಮಾಡುತ್ತಾರೆ. ತೃತೀಯ ರಂಗದ ಮುಖಂಡರು ಮಳೆಗಾಲದ ನಾಯಿಕೊಡೆಗಳಿದ್ದಂತೆ ಎಂದು ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಜೆಡಿಎಸ್HD Kumaraswamyಎಚ್ ಡಿ ಕುಮಾರಸ್ವಾಮಿSriramuluಶ್ರೀರಾಮುಲುKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆJD(S
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


