ರಾಜಕೀಯ

ರಾಜರಾಜೇಶ್ವರಿನಗರ ಚುನಾವಣೆ: ಶೇ.54ರಷ್ಟು ಮತದಾನ

ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಸಂಗ್ರಹಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ.....

ರಾಜರಾಜೇಶ್ವರಿನಗರ ಚುನಾವಣೆ: ಶೇ.54ರಷ್ಟು ಮತದಾನ
ಪತ್ನಿ ಶಿಲ್ಪಾ ಜತೆ ಮತ ಚಲಾಯಿಸಿದ ಗೋಲ್ಡನ್ ಸ್ಟಾರ್ ಗಣೇಶ್
Published On :
ಬೆಂಗಳೂರು: ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಸಂಗ್ರಹಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ರಾಜರಾಜೇಶ್ವರಿನಗರ ವಿಧಾನಸಭೆಗೆ ಸೋಮವಾರ ಚುನಾವಣೆ ನಡೆದಿದ್ದು, ಶೇ. 54ರಷ್ಟು ಮತದಾನವಾಗಿದೆ.
ಕೆಲವು ಮತಗಟ್ಟೆಗಳಲ್ಲಿ ಇವಿಎಂ ದೋಷ ಹೊರತುಪಡಿಸಿ ಉಳಿದಂತೆ ಬಹುತೇಕ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ರಾಜರಾಜೇಶ್ವರಿನಗರದಲ್ಲಿ ಕಳೆದ ಬಾರಿ ಶೇ. 56ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.2ರಷ್ಟು ಕಡಿಮೆ ಮತದಾನವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.
ಮೇ 31ರಂದು ರಾಜರಾಜೇಶ್ವರಿ ಕ್ಷೇತ್ರದ ಫಲಿತಾಂಶ ಪ್ರಕಟಗೊಳ್ಳಲಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ 9 ಸಾವಿರಕ್ಕೂ ಅಧಿಕ ಅಸಲಿ ಮತದಾರರ ಗುರುತಿನ ಚೀಟಿಗಳು ದೊರೆತ ಹಿನ್ನೆಲೆಯಲ್ಲಿ ಮೇ 12ರಂದು ನಡೆಯಬೇಕಿದ್ದ ಚುನಾವಣೆಯನ್ನು ಚುನಾವಣಾ ಆಯೋಗ 28ಕ್ಕೆ ಮುಂದೂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.