ರಾಜಕೀಯ

ಡಿಕೆ ಸಹೋದರರ 11 ಆಪ್ತರ ಮನೆ ಮೇಲೆ ಸಿಬಿಐ ದಾಳಿ

ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ 11 ಆಪ್ತರ ಮನೆಗಳ ಮೇಲೆ ಸಿಬಿಐ ...

ಡಿಕೆ ಸಹೋದರರ 11 ಆಪ್ತರ ಮನೆ ಮೇಲೆ ಸಿಬಿಐ ದಾಳಿ
ಡಿ.ಕೆ ಶಿವಕುಮಾರ್
Published On :
ಬೆಂಗಳೂರು: ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ 11 ಆಪ್ತರ ಮನೆಗಳ ಮೇಲೆ ಸಿಬಿಐ ಇಂದು  ದಾಳಿ ನಡೆಸಿದೆ.
ಕೇಂದ್ರ ಸರ್ಕಾರ ನಮ್ಮ ವಿರುದ್ಧ ಸಂಚು ಹೂಡಿದೆ, 11 ಮಂದಿ ನಮ್ಮ ಆಪ್ತರ ಮನೆ ಮೇಲೆ ಸರ್ಚ್‌ ವಾರಂಟ್‌ ಹೊರಡಿಸಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಡಿ.ಕೆ.ಶಿಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಅವರು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ದಾಳಿ ನಡೆದಿದೆ.
ಡಿ.ಕೆ.ಶಿವಕುಮಾರ್‌ ಅವರ ಕೆಲ ವ್ಯವಹಾರದ ಪಾಲುದಾರರ ನಿವಾಸಗಳ ಮೇಲೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ವರದಿಯಾಗಿದೆ. ಬುಧವಾರ ಸಿಬಿಐ 11 ಮಂದಿಯ ವಿರುದ್ಧ ಕೋರ್ಟ್‌ನಲ್ಲಿ ಸರ್ಚ್‌ ವಾರೆಂಟ್‌ ಪಡೆದಿತ್ತು. . 
ಗುರುವಾರ ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್‌ ಅವರು ಸಹೋದರ ಸುರೇಶ್‌ ಜೊತೆ ತುರ್ತು ಸುದ್ದಿಗೋಷ್ಠಿ ನಡೆಸಿ ದಾಳಿ ನಡೆಯುವ ಬಗ್ಗೆ ನಮಗೆ ಮಾಹಿತಿ ದೊರಕಿದೆ, ಇದಕ್ಕೆ ನಾವು ಜಗ್ಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.