ಆರ್ ಆರ್ ನಗರ ಕ್ಷೇತ್ರ ಫಲಿತಾಂಶ: ಕಾಂಗ್ರೆಸ್ ನ ಮುನಿರತ್ನಗೆ ಭರ್ಜರಿ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ...

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಕಾಣುವ ಮೂಲಕ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮುನಿರತ್ನ ಅವರು ಇತರ ಅಭ್ಯರ್ಥಿಗಳಿಗಿಂತ 25,492 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಅವರಿಗೆ 1,08.064 ಮತಗಳು ಲಭ್ಯವಾಗಿದೆ. ಬಿಜೆಪಿಯ ತುಳಸಿ ಮುನಿರಾಜು ಗೌಡ ಅವರಿಗೆ 82,572 ಮತ್ತು ಜೆಡಿಎಸ್ ನ ರಾಮಚಂದ್ರ 60,360 ಮತಗಳನ್ನು ಪಡೆದಿದ್ದಾರೆ.
ತಮ್ಮ ಅಭ್ಯರ್ಥಿ ಗೆಲುವು ಕಾಣುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತ್ತು ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು ಹರ್ಷದಿಂದ ಕೇಕೆ ಹಾಕುತ್ತಾ, ಕುಣಿಯುತ್ತಾ, ಸಿಹಿ ಹಂಚುತ್ತಾ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಕಳೆದ ಮೇ 12ರಂದು ಕರ್ನಾಟಕ ರಾಜ್ಯಾದ್ಯಂತ ವಿಧಾನಸಭೆ ಚುನಾವಣೆ ನಡೆದಿತ್ತು. ಆದರೆ ಮತದಾರರ ಗುರುತು ಚೀಟಿ ಮತ್ತು ಇತರ ಅಕ್ರಮ ನಡೆದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿತ್ತು. ಶೇಕಡಾ 54.20 ಮತದಾನ ನಡೆದಿತ್ತು.
ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ಡುಕೊಂಡ ಮುನಿರತ್ನ 18 ಸುತ್ತುಗಳ ಮತ ಎಣಿಕೆ ಪ್ರಕ್ರಿಯೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದರು. ಎರಡು ಸಾವಿರಕ್ಕೂ ಹೆಚ್ಚು ನೋಟಾ ಮತಗಳು ದಾಖಲಾಯಿತು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಹುಚ್ಚ ವೆಂಕಟ್ ನೋಟಾಕ್ಕಿಂತಲೂ ಕಡಿಮೆ, 604 ಮತಗಳನ್ನು ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


