2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸೋಲು ಕಾಣಲಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ
2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಲು ಕಾಣಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

Published On :
ಬೆಂಗಳೂರು; 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಲು ಕಾಣಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ದೇಶದ ಹಲವು ಭಾಗದಲ್ಲಿ ಲೋಕಸಭೆ ಉಪಚುನಾವಣೆಗಳು ನಡೆದಿದ್ದು, ಚುನಾವಣೆಗಳಲ್ಲಿ ಮೋದಿ ವಿರೋಧಿ ಅಲೆ ಎದ್ದು ಕಾಣುತ್ತಿದೆ. ಈ ಫಲಿತಾಂಶಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ಸೋಲು ಕಾಣುವ ಮುನ್ಸೂಚನೆಯನ್ನು ನೀಡಿದೆ ಎಂದು ಹೇಳಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರ ಗೆಲವು ನಿರೀಕ್ಷಿತವಾದದ್ದು. ವಿಧಾನಸಭೆ ಚುನಾವಣೆ ನಡೆದ ದಿನದಂದೇ ಚುನಾವಣೆ ನಡೆಸಿದ್ದರೂ ಇದೇ ಫಲಿತಾಂಶವೇ ಬರುತ್ತಿತ್ತು. ಅನೇಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯುಂಟಾಗಿದ್ದು, ಮೋದಿ ಅಲೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ModiSiddaramaiahಸಿದ್ದರಾಮಯ್ಯKarnatakaಕರ್ನಾಟಕಮುನಿರತ್ನಮೋದಿMuniratna2019 ಲೋಕಸಭಾ ಚುನಾವಣೆ2019 Lok Sabha electionRR Nagar assembly pollಆರ್\'ಆರ್ ನಗರ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


