ರಾಜಕೀಯ

ರಾಜರಾಜೇಶ್ವರಿನಗರ ಚುನಾವಣೆ ಫಲಿತಾಂಶ: ಪಕ್ಷೇತರ ಅಭ್ಯರ್ಥಿ ಹುಚ್ಚ ವೆಂಕಟ್ ಪಡೆದ ಮತಗಳೆಷ್ಟು ಗೊತ್ತಾ?

ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಟ, ನಿರ್ದೇಶಕ ಹುಚ್ಚಾ ವೆಂಕಟ್ ಅವರು ಕುತೂಹಲ ಕೆರಳಿಸಿದ್ದರು.

ರಾಜರಾಜೇಶ್ವರಿನಗರ ಚುನಾವಣೆ ಫಲಿತಾಂಶ: ಪಕ್ಷೇತರ ಅಭ್ಯರ್ಥಿ ಹುಚ್ಚ ವೆಂಕಟ್ ಪಡೆದ ಮತಗಳೆಷ್ಟು ಗೊತ್ತಾ?
ಹುಚ್ಚಾ ವೆಂಕಟ್
Published On :
ಬೆಂಗಳೂರು: ರಾಜರಾಜೇಶ್ವರಿನಗರ ಚುನಾವಣೆ ಫಲಿತಾಂಶ ಹೊರಬಂದಿದ್ದು ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು 1 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. 
ಬಿಜೆಪಿ ಅಭ್ಯರ್ಥಿ ತುಳಸಿರಾಜು ಗೌಡ ಅವರು 70 ಸಾವಿರ ಹಾಗೂ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಅವರು 54 ಸಾವಿರ ಮತಗಳನ್ನು ಪಡೆದಿದ್ದಾರೆ. ಈ ಮಧ್ಯೆ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಟ, ನಿರ್ದೇಶಕ ಹುಚ್ಚಾ ವೆಂಕಟ್ ಕುತೂಹಲ ಕೆರಳಿಸಿದ್ದರು. 
ಇದೀಗ ಬಂದ ಫಲಿತಾಂಶದ ಪ್ರಕಾರ ಹುಚ್ಚಾ ವೆಂಕಟ್ 600 ರಿಂದ 700 ಮತಗಳನ್ನು ಮಾತ್ರ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ಈ ಬಾರಿ ರಾಜರಾಜೇಶ್ವರಿನಗರದಲ್ಲಿ ನೋಟಾ ಮತವೇ 2000 ಇದೆ. ನೋಟಾಗಿಂತ ಕಡಿಮೆ ಮತಗಳನ್ನು ಹುಚ್ಚಾ ವೆಂಕಟ್ ಪಡೆದು ಠೇವಣಿಯನ್ನು ಕಳೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.