ಹಣ-ಅಧಿಕಾರದ ಮದದಿಂದ ಬಿಜೆಪಿ ಅಭ್ಯರ್ಥಿಯ ಖರೀದಿ, ಡಿಕೆಶಿಗೆ ಒಳ್ಳೆಯದಾಗಲಿ: ಬಿಎಸ್ ವೈ ಗರಂ
ರಾಮನಗರ ಉಪಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಕಮಲ ಬಿಟ್ಟು ಕೈ ಸೇರಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾಲಿ ರಾಜಕೀಯ ಬೆಳವಣಿಗೆ ಕುರಿತು ತೀವ್ರ ಗರಂ ಆಗಿದ್ದಾರೆ.

Published On :
ಶಿವಮೊಗ್ಗ: ರಾಮನಗರ ಉಪಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಕಮಲ ಬಿಟ್ಟು ಕೈ ಸೇರಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾಲಿ ರಾಜಕೀಯ ಬೆಳವಣಿಗೆ ಕುರಿತು ತೀವ್ರ ಗರಂ ಆಗಿದ್ದಾರೆ.
ಉಪ ಚುನಾವಣೆಗೆ ಇನ್ನು ಕೇವಲ 2 ದಿನ ಬಾಕಿ ಇರುವಂತೆ ಅಲ್ಲದೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ರಾಮನಗರ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಕಣದಿಂದ ಹಿಂದೆ ಸರಿದಿದ್ದು, ಮಾತ್ರವಲ್ಲದೇ ತಮ್ಮ ಮಾತೃ ಪಕ್ಷಕ್ಕೆ ಹೋಗುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬೆಳವಣಿಗೆ ರಾಜ್ಯ ಬಿಜೆಪಿಗೆ ದೊಡ್ಡ ಆಘಾತ ನೀಡಿದ್ದು, ಈ ಬಗ್ಗೆ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಸಚಿವ ಡಿಕೆ ಶಿವಕುಮಾರ್ ಅವರು ಹಣ ಕೊಟ್ಟು ರಾಮನಗರ ಬಿಜೆಪಿ ಅಭ್ಯರ್ಥಿಯನ್ನು ಖರೀದಿಸಿದ್ದಾರೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಮಾರ್ಮಿಕವಾಗಿ ಹೇಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengalurubjpಬಿಜೆಪಿPoliticsರಾಜಕೀಯಬಿಎಸ್ ಯಡಿಯೂರಪ್ಪBS YaddyurappaKarnataka politicsಕರ್ನಾಟಕ ರಾಜಕೀಯRamanagara bypollರಾಮನಗರ ಉಪಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


