ರಾಜಕೀಯ

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕೋಕ್; ಕೆಪಿಸಿಸಿ ಮಹಿಳಾ ಘಟಕದ ನೂತನ ಅಧ್ಯಕ್ಷೆ ಪುಷ್ಪಾ ಅಮರನಾಥ್!

ಸಚಿವ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ಕೋಕ್ ನೀಡಲಾಗಿದ್ದು ಆ ಜಾಗಕ್ಕೆ...

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕೋಕ್; ಕೆಪಿಸಿಸಿ ಮಹಿಳಾ ಘಟಕದ ನೂತನ ಅಧ್ಯಕ್ಷೆ ಪುಷ್ಪಾ ಅಮರನಾಥ್!
ಲಕ್ಷ್ಮೀ ಹೆಬ್ಬಾಳ್ಕರ್-ಪುಷ್ಪಾ ಅಮರನಾಥ್
Published On :
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ಕೋಕ್ ನೀಡಲಾಗಿದ್ದು ಆ ಜಾಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಪುಷ್ಪಾ ಅಮರನಾಥ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 
ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರ ವಿರುದ್ಧ ಜಗಳಕ್ಕೆ ನಿಂತಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದದ ಕೇಂದ್ರ ಬಿಂದುವಾಗಿದ್ದರು. ಆ ಸಂದರ್ಭದಲ್ಲಿ ಅವರ ಕೆಲ ಹೇಳಿಕೆಗಳು ರಾಜ್ಯ ಕಾಂಗ್ರೆಸ್ ನಾಯಕರು ಮುಜುಗರ ಅನುಭವಿಸುವಂತಾಗಿತ್ತು. ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಧ್ಯಕ್ಷ ಸ್ಥಾನದಿಂದ ಕೋಕ್ ನೀಡಲಾಗಿದ್ದು ಇದು ಹಲವರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. 
ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನೇ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮುಂದುವರೆಸಬೇಕೆಂದು ರಾಜ್ಯದ ಕೆಲ ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಆದರೆ ಸಿದ್ದರಾಮಯ್ಯನವರ ಬಣದಲ್ಲಿ ಗುರುತಿಸಿಕೊಂಡಿದ್ದ ಪುಷ್ಪಾ ಅವರಿಗೆ ಅಧ್ಯಕ್ಷೆ ಸ್ಥಾನ ಲಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.