2019ರ ಚುನಾವಣೆಯಲ್ಲೂ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಂದುವರೆಯಲಿದೆ: ಸಿಎಂ ಕುಮಾರಸ್ವಾಮಿ
2019ರ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

Published On :
ಹಾಸನ: 2019ರ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.
ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಗೆಲವು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಆನ್'ಲೈನ್ ಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಈ ರೀತಿಯ ಬೆಳವಣಿಗೆಗಳು ಯುವ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಭವಿಷ್ಯದಲ್ಲಿ ಆನ್'ಲೈನ್ ಮದ್ಯ ಮಾರಾಟವನ್ನು ನಿಷೇಧ ಮಾಡುವ ಕುರಿತು ಚಿಂತನೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


