ರಾಮನಗರ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ತಮ್ಮ ಸ್ವ ಕ್ಷೇತ್ರದಲ್ಲೇ ಮತದಾನ ಮಾಡುವಂತಿಲ್ಲ ಏಕೆ ಗೊತ್ತಾ?
ರಾಮನಗರ ವಿಧಾನಸಭೆ ಉಪ ಚುನಾವಣೆ ನಿಮಿತ್ತ ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಮನಗರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಇಂದಿನ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತಿಲ್ಲ.

Published On :
ರಾಮನಗರ: ರಾಮನಗರ ವಿಧಾನಸಭೆ ಉಪ ಚುನಾವಣೆ ನಿಮಿತ್ತ ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಮನಗರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಇಂದಿನ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತಿಲ್ಲ.
ರಾಮನಗರ ಬಿಜೆಪಿ ಅಭರ್ಥಿ ಕಣದಿಂದ ಹಿಂದೆ ಸರಿದಿರುವುದರಿಂದ ಜೆಡಿಎಸ್ ಅಭ್ಯರ್ಥಿ ಹಾಗೂ ಸಿಎಂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಗೆಲುವಿನ ಕುರಿತು ಮಾತುಕತೆ ನಡೆಯುತ್ತಿದ್ದರೂ, ಇಂದಿನ ಮತದಾನದ ಪ್ರಕ್ರಿಯೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ತಮ್ಮದೇ ಸ್ವಕ್ಷೇತ್ರದಲ್ಲಿ ಮತದಾನ ಮಾಡುವಂತಿಲ್ಲ.
ಹೌದು.. ಅನಿತಾ ಕುಮಾರಸ್ವಾಮಿ ರಾಮನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿದ್ದರೂ ಅವರೂ ಇಂದು ಮತದಾನ ಮಾಡುವಂತಿಲ್ಲ. ಅನಿತಾ ಕುಮಾರಸ್ವಾಮಿ ಅವರ ಹೆಸರು ರಾಮನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿಲ್ಲ. ಅನಿತಾಕುಮಾರ ಸ್ವಾಮಿ ಮತ್ತು ಸಿಎಂ ಕುಮಾರಸ್ವಾಮಿ ಮಾಗಡಿ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಹೆಸರು ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಡದಿ ಪುರಸಭೆಯ ಕೇತಗಾನಹಳ್ಳಿಯ ಮತದಾರರ ಪಟ್ಟಿಯಲ್ಲಿದೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿದ್ದ ಎಲ್.ಚಂದ್ರಶೇಖರ್ ಹೆಸರು ಸಹ ಬಿಡದಿ ಪುರಸಭೆ ವ್ಯಾಪ್ತಿಯ ಇಟ್ಟುಮಡು ಗ್ರಾಮದ ಮತದಾರರ ಪಟ್ಟಿಯಲ್ಲಿ ಸೇರಿದೆ.
ಪಕ್ಷೇತರರಾಗಿ ಸ್ಪರ್ಧಿಸಿರುವ ಕುಮಾರನಾಯ್ಕ ಮತ್ತು ಸುರೇಂದ್ರ ಮಾತ್ರ ರಾಮನಗರ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಉಳಿದಂತೆ ಪೂರ್ವಾಂಚಲ ಮಹಾಪಂಚಾಯತ್ ಪಾರ್ಟಿಯ ಅಭ್ಯರ್ಥಿಯಾಗಿರುವ ಎಚ್.ಡಿ.ರೇವಣ್ಣ ಅವರು ಚಿಕ್ಕಮಗಳೂರು, ಪಕ್ಷೇತರ ಅಭ್ಯರ್ಥಿಗಳಾದ ಡಿ.ಎಂ.ಮಾದೇಗೌಡ ಮಾಗಡಿಯಲ್ಲಿ, ಮುನಿಯಾಬೋವಿ ಹೆಸರು ಚಿಕ್ಕಮಗಳೂರಿನ ಮತದಾರರ ಪಟ್ಟಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


