ಪತಿಯ ಸಿಎಂ ಸ್ಥಾನ ಉಳಿಸು ಎಂದು ಹಾಸನಾಂಬೆ ಬಳಿ ಬೇಡಿಕೊಂಡಿದ್ದೇನೆ: ಅನಿತಾ ಕುಮಾರಸ್ವಾಮಿ
ಅಧಿದೇವತೆ ಹಾಸನಾಂಬೆಯ ಆರ್ಶೀವಾದದಿಂದ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ...

Published On :
ಹಾಸನ: ಅಧಿದೇವತೆ ಹಾಸನಾಂಬೆಯ ಆರ್ಶೀವಾದದಿಂದ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಹಾಸನಾಂಬೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ, ನನಗೆ ದೇವರ ಮೇಲೆ ಅತೀವ ನಂಬಿಕೆ ಇದೆ. ಹೀಗಾಗಿ ಪ್ರತಿ ವರ್ಷ ಇಲ್ಲಿಗೆ ಬರುತ್ತೇನೆ. ಕುಮಾರಸ್ವಾಮಿ ಅವರಿಗೆ ಸಿಕ್ಕಿರುವ ಸಿಎಂ ಸ್ಥಾನ ಉಳಿಸುವ ಎಂದು ಬೇಡಿಕೊಂಡಿದ್ದೇನೆ. ಹಾಗೆಯೇ ನಾಡಿನ ಜನರಿಗೆ ಸುಖ, ಶಾಂತಿ ಸಿಗಲಿ. ರೈತರ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ಇದೇ ವೇಳೆ ರಾಮನಗರ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅನಿತಾ ಕುಮಾರಸ್ವಾಮಿ ಅವರು, ಉಳಿದ ನಾಲ್ಕು ಕ್ಷೇತ್ರಗಳಲ್ಲೂ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Kumaraswamyಎಚ್ ಡಿ ಕುಮಾರಸ್ವಾಮಿAnita Kumaraswamyಅನಿತಾ ಕುಮಾರಸ್ವಾಮಿHassanambe blessingsಹಾಸನಾಂಬೆ ಆರ್ಶೀವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


