ರಾಮನಗರದಲ್ಲಿ ಮತ ಎಣಿಕೆಗೆ ಮುನ್ನವೇ ಗೆದ್ದ ಅನಿತಾ ಕುಮಾರಸ್ವಾಮಿ!
ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ.

Published On :
ರಾಮನಗರ: ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ.
ದೀಪಾವಳಿಯ ದಿನವೇ ಪ್ರಕಟವಾಗುತ್ತಿರುವ ಫಲಿತಾಂಶದಲ್ಲಿ ಯಾರಿಗೆ ಸಿಹಿ, ಯಾರಿಗೆ ಕಹಿ ಎಂದು ಇನ್ನೂ ನಿರ್ಧರಿಸಬೇಕಾಗಿದೆ. ಆದರೆ ಈ ನಡುವೆ ರಾಮನಗರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ಬ್ಯಾನರ್ ಹಾಕಲಾಗಿದೆ!
ಮತ ಎಣಿಕೆಗೆ ಮುನ್ನವೇ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ನಗರದ ಅಲ್ಲಲ್ಲಿ ಬ್ಯಾನರ್ ಹಾಕಲಾಗಿದೆ.
ಜೆಡಿಎಸ್-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆದ್ದಿದ್ದಾರೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.ಜೆಡಿಎಸ್ ಕಾರ್ಯಕರ್ತರು ಮತ ಎಣಿಕೆಯ ಮುನ್ನವೇ ಬ್ಯಾನರ್ ತಯಾರಿಸಿ ಅಲ್ಲಲ್ಲಿ ಪ್ರದರ್ಶಿಸಿದ್ದಾರೆ.
ರಾಮನಗರದಲ್ಲಿ ನವೆಂಬರ್ 3ಕ್ಕೆ ಮತದಾನ ನಡೆದಿದ್ದು ಶೇ. 71.88 ಮತದಾನವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


