ಸೋಲು ಅನಾಥ: ಬಳ್ಳಾರಿ ಸೋಲಿನ ಹೊಣೆ ನನ್ನದೇ- ಶ್ರೀರಾಮುಲು
ಬಳ್ಳಾರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದ್ದು, ಪಕ್ಷದ ಸೋಲಿಗೆ ನಾನು ಯಾರನ್ನೂ ದೂರುವುದಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

Published On :
ಬೆಂಗಳೂರು: ಬಳ್ಳಾರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದ್ದು, ಪಕ್ಷದ ಸೋಲಿಗೆ ನಾನು ಯಾರನ್ನೂ ದೂರುವುದಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.
ಸೋಲು ಎಂದಿಗೂ ಅನಾಥ, ಶಾಂತಾ ಅವರ ಸೋಲಿನ ಹೊಣೆ ನನ್ನದೇ, ಉಪಚುನಾವಣೆಗೆ ಸಹಕಾರ ನೀಡದಿರುವುದಕ್ಕೆ ಸೋತೆ ಎಂದು ಯಾರನ್ನೂ ದೂರುವುದಿಲ್ಲ. ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಸೋಮಣ್ಣ, ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಆದರೆ ಜಿಲ್ಲೆಯ ಜನರು ನಮ್ಮನ್ನು ತಿರಸ್ಕರಿಸಿದ್ದಾರೆ. ಜನತೆಯ ತೀರ್ಪನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.
ಕಾರ್ಯಕರ್ತರ ಶ್ರಮದ ಹೊರತಾಗಿಯೂ ಭಗವಂತ ನಮಗೆ ಫಲ ಕೊಟ್ಟಿಲ್ಲ. ಆದರೆ ಆಡಳಿತ ಯಂತ್ರವನ್ನು ದುರುಪಯೋಗ ಪಡೆಸಿಕೊಂಡು ವಿ.ಎಸ್.ಉಗ್ರಪ್ಪ ಅವರನ್ನು ಗೆಲ್ಲಿಸಲಾಗಿದೆ. ಕ್ಷೇತ್ರದ ಜನರು ನನಗೆ ಸಹಕಾರ ನೀಡಿದ್ದಾರೆ. ಈಗ ಕೈಬಿಟ್ಟರು ಅಂತ ನಾನು ಅವರನ್ನು ದ್ವೇಷಿಸುವುದಿಲ್ಲ ಎಂದು ಶ್ರೀರಾಮುಲು ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಉಪಚುನಾವಣೆಯ ಫಲಿತಾಂಶ 2019ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ.ಇತರ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಪ್ರಾಬಲ್ಯವಿತ್ತು. ಹೀಗಾಗಿ ಜಯ ಗಳಿಸಿದ್ದಾರೆ. ಬಳ್ಳಾರಿ ಕ್ಷೇತ್ರದ ಸೋಲಿನ ಕುರಿತು ಆತ್ಮಾವಲೋಕನ ಮಾಡುತ್ತೇವೆ ಎಂದು ರಾಮುಲು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


