ಶಿವಮೊಗ್ಗ ಉಪ ಚುನಾವಣೆ: ಬಿವೈ ರಾಘವೇಂದ್ರಗೆ ಭಾರೀ ಅಂತರದ ಗೆಲುವು
ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬಾರೀ ಅಂತರದ ಜಯ ಸಾಧಿಸಿದ್ದಾರೆ.

Published On :
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬಾರೀ ಅಂತರದ ಜಯ ಸಾಧಿಸಿದ್ದಾರೆ.
ಬಿಜೆಪಿಗೆ ಸೆಡ್ಡು ಹೊಡೆಯುವ ಸಲುವಾಗಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಧು ಬಂಗಾರಪ್ಪಗೆ ಭಾರೀ ಮುಖಭಂಗವಾಗಿದೆ.ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ 50 ಸಾವಿರಕ್ಕಿಂತ ಅಧಿಕ ಮತಗಳ ಅಂತರದಿಂದ ವಿಜೇತರಾಗಿದ್ದಾರೆ.
ಬಿಜೆಪಿಯ ರಾಘವೇಂದ್ರ ಅವರಿಗೆ 5,42,956 ಮತಗಳು, ಜೆಡಿಎಸ್ ನ ಮಧುಬಂಗಾರಪ್ಪ ಅವರಿಗೆ 4,90,788 ಮತಗಳು ಬಂದಿದೆ.ರಾಘವೇಂದ್ರ ಅವರಿಗೆ 52,168 ಮತಗಳ ಅಂತರದಿಂಡ ಗೆಲುವಾಗಿದೆ
ಇದೇ ವೇಳೆ ಮಂಡ್ಯ, ಬಳ್ಳಾರಿಗಳಲ್ಲಿ ಕ್ರಮವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಜಯಭೇರಿ ಬಾರಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


