ಜಾತ್ಯಾತೀತ ಮೈತ್ರಿ ಬಿಜೆಪಿಯನ್ನು ಮಣಿಸುತ್ತೆ ಎಂಬದನ್ನು ಕರ್ನಾಟಕ ಚುನಾವಣೆ ತೋರಿಸಿದೆ: ಕಾಂಗ್ರೆಸ್
ಕರ್ನಾಟಕ ಉಪ ಚುನಾವಣೆಯ ಫಲಿತಾಂಶ ಜಾತ್ಯಾತೀತ ಮೈತ್ರಿ ಬಿಜೆಪಿಯನ್ನು ಸೋಲಿಸುತ್ತೆ ಎಂಬುದನ್ನು ತೋರಿಸಿದೆ...

Published On :
ಮುಂಬೈ: ಕರ್ನಾಟಕ ಉಪ ಚುನಾವಣೆಯ ಫಲಿತಾಂಶ ಜಾತ್ಯಾತೀತ ಮೈತ್ರಿ ಬಿಜೆಪಿಯನ್ನು ಸೋಲಿಸುತ್ತೆ ಎಂಬುದನ್ನು ತೋರಿಸಿದೆ ಎಂದು ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅವರು ಮಂಗಳವಾರ ಹೇಳಿದ್ದಾರೆ.
ಕಳೆದ ಶನಿವಾರ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ - ಜೆಡಿಎಸ್ ಮೈತ್ರಿ ನಾಲ್ಕು ಸ್ಥಾನಗಳಲ್ಲಿ ಹಾಗೂ ಪ್ರತಿಪಕ್ಷ ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.
ಉಪ ಚುನಾವಣೆ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ ಸಚಿವ ಚವಾಣ್ ಅವರು, ಈಗ ಪರಿಸ್ಥಿತಿ ಬದಲಾಗಿದೆ. ಬಿಜೆಪಿಯ ಭದ್ರಕೋಟೆಯಾಗಿದ್ದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಅದರಲ್ಲೂ ವಿಶೇಷವಾಗಿ ರೆಡ್ಡಿ ಸಹೋದರರ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಗಮನಾರ್ಹ ಎಂದಿದ್ದಾರೆ.
ಕರ್ನಾಟಕದ ಈ ಫಲಿತಾಂಶ ಪ್ರಾದೇಶಿಕ ಪಕ್ಷಗಳು, ಜಾತ್ಯಾತೀತ ಪಕ್ಷಗಳು ಹಾಗೂ ಇತರೆ ಸಣ್ಣ ಪಕ್ಷಗಳು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಯನ್ನು ಸೋಲಿಸಬಹುದು ಎಂಬುದನ್ನು ಸಾಬೀತು ಮಾಡಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


