ರಾಜಕೀಯ

ಜನಾರ್ದನ ರೆಡ್ಡಿ ವಿರುದ್ಧ ದ್ವೇಷ ಸಾಧಿಸಿಲ್ಲ: ಸಿಎಂ ಕುಮಾರಸ್ವಾಮಿ

ಆ್ಯಂಬಿಡೆಂಟ್​ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಬಂಧಿಸಿರುವುದರಲ್ಲಿ ನನ್ನ....

ಜನಾರ್ದನ ರೆಡ್ಡಿ ವಿರುದ್ಧ ದ್ವೇಷ ಸಾಧಿಸಿಲ್ಲ: ಸಿಎಂ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ಆ್ಯಂಬಿಡೆಂಟ್​ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಬಂಧಿಸಿರುವುದರಲ್ಲಿ ನನ್ನ ಪಾತ್ರ ಇಲ್ಲ ಮತ್ತು ಅವರ ವಿರುದ್ಧ ನಾನು ಯಾವುದೇ ಷಡ್ಯಂತ್ರ ನಡೆಸಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಜನಾರ್ದನ ರೆಡ್ಡಿ ಇಂದು ಸಂಜೆ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸಿಎಂ ಕುಮಾರಸ್ವಾಮಿ ತಮ್ಮ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಆ್ಯಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ದ್ವೇಷದ ರಾಜಕಾರಣವಿಲ್ಲ ಎಂದರು.
ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ನಾನಾಗಲಿ, ನನ್ನ ಸರ್ಕಾರವಾಗಲಿ ಅಥವಾ ಅಧಿಕಾರಿಗಳಾಗಲಿ ದ್ವೇಷದ ರಾಜಕಾರಣದಲ್ಲಿ ತೊಡಗಿಲ್ಲ. ಅಧಿಕಾರ ದುರ್ಬಳಕೆಯನ್ನೂ ಮಾಡಿಕೊಂಡಿಲ್ಲ. ಇದನ್ನು ಸ್ಪಷ್ಟವಾಗಿಯೇ ಹೇಳುತ್ತಿದ್ದೇನೆ ಎಂದರು. 
ಇದೇ ವೇಳೆ ರೆಡ್ಡಿಯ ಆಪ್ತರೊಬ್ಬರು 18 ಕೋಟಿ ರುಪಾಯಿಗಳನ್ನು ತಿರುಪತಿ ತಿಮ್ಮಪ್ಪನ ಹುಂಡಿಗೆ ಹಾಕಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಇದು ಹಾಸ್ಯವೋ ಅಥವಾ ಗಂಭೀರವೂ ನನಗೆ ಅರ್ಥವಾಗುತ್ತಿಲ್ಲ ಎಂದು ಲೇವಡಿ ಮಾಡಿದ ಕುಮಾರಸ್ವಾಮಿ, ಇದು ಯಾವ ರೀತಿ ಅರ್ಥ ಬರುತ್ತದೆ ಎಂಬುದನ್ನು ಜವಾಬ್ದಾರಿ ಸ್ಥಾನದಲ್ಲಿರುವವರು ಯೋಚನೆ ಮಾಡಬೇಕು. ಸಾರ್ವಜನಿಕರ ಹಣ ತೆಗೆದುಕೊಂಡು ಹೋಗಿ ತಿರುಪತಿಯ ಹುಂಡಿಗೆ ಹಾಕಿದ್ದೇನೆ ಎಂದು ಹೇಳುವ ಹಿಂದಿನ ಅರ್ಥವೇನು ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.