ಜೆಡಿಎಸ್ ಗೆ 5 ವರ್ಷ ಸಿಎಂ ಸ್ಥಾನ ಬರೆದುಕೊಟ್ಟಿದ್ದೇವೆ, ಮಾತು ತಪ್ಪುವ ಮಾತೇ ಇಲ್ಲ: ಸಚಿವ ಡಿಕೆ ಶಿವಕುಮಾರ್
ಜೆಡಿಎಸ್ ಪಕ್ಷಕ್ಕೆ 5 ವರ್ಷ ಮುಖ್ಯಮಂತ್ರಿ ಸ್ಥಾನ ಬರೆದುಕೊಟ್ಟಿದ್ದೇವೆ. ಈಗ ಮಾತು ತಪ್ಪುವ ಮಾತೇ ಇಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

Published On :
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 5 ವರ್ಷ ಮುಖ್ಯಮಂತ್ರಿ ಸ್ಥಾನ ಬರೆದುಕೊಟ್ಟಿದ್ದೇವೆ. ಈಗ ಮಾತು ತಪ್ಪುವ ಮಾತೇ ಇಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅವಕಾಶ ಸಿಕ್ಕರೆ ತಾವು ಕೂಡ ಸಿಎಂ ಆಗುತ್ತೇವೆ ಎಂಬ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರ ಹೇಳಿಕೆ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್ ಅವರು, ಐದು ವರ್ಷ ಜೆಡಿಎಸ್ಗೆ ಸಿಎಂ ಹುದ್ದೆಯನ್ನು ಬರೆದು ಕೊಟ್ಟಿದ್ದೇವೆ. ಆ ಮಾತಿನಿಂದ ಹಿಂದೆ ಸರಿಯುವ ಮಾತೇ ಇಲ್ಲ. ಆಸೆ ಎಲ್ಲರಿಗೂ ಇರುತ್ತದೆ, ಅದು ತಪ್ಪಲ್ಲ. ನನಗಂತೂ ಮುಖ್ಯಮಂತ್ರಿ ಹುದ್ದೆಗೇರುವ ಧಾವಂತವಿಲ್ಲ. ಅವರ ಅಭಿಪ್ರಾಯದ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಮಾತನಾಡಿದ್ದ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಅವರು, 'ಈಗ ಡಿಸಿಎಂ ಆಗಿದ್ದೇನೆ. ಹೈಕಮಾಂಡ್ ಮುಂದೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಮುಖ್ಯಮಂತ್ರಿ ಸ್ಥಾನ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಪರಮೇಶ್ವರ್ ಅವರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಬಿಂಬಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruDK Shivakumarಜಿ ಪರಮೇಶ್ವರಡಿಕೆ ಶಿವಕುಮಾರ್G ParameshwarKarnataka politicsಕರ್ನಾಟಕ ರಾಜಕೀಯKarnataka CMಕರ್ನಾಟಕ ಸಿಎಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


