ಸಿಎಂ ಆಗಲು ಸಿದ್ಧ: ಪರಮೇಶ್ವರ್ ಹೇಳಿಕೆಗೆ ಹೆಚ್'ಡಿಕೆ ಸಮರ್ಥನೆ
ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿಯಾಗಲು ಸಿದ್ಧ ಎಂದಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ...

Published On :
ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿಯಾಗಲು ಸಿದ್ಧ ಎಂದಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪರಮೇಶ್ವರ್ ಅವರ ಹೇಳಿಕೆಯಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಾಕಷ್ಟು ಜನರು ಸಮರ್ಥರಿದ್ದಾರೆ. ಅದರಲ್ಲು ಉಪ ಮುಖ್ಯಮಂತ್ರಿ ಪರಮೇಶ್ವರ್ ಕೂಡ ಒಬ್ಬರು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅವಕಾಶವಿದ್ದಾಗ ತಾವೂ ಒಬ್ಬ ಅಪೇಕ್ಷಿತನೆಂದ ಪರಮೇಶ್ವರ ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಅದನ್ನು ಬೇರೆ ರೀತಿ ವ್ಯಾಖ್ಯಾನಿಸುವ ಅಗತ್ಯವೂ ಇಲ್ಲ. ಸಿಎಂ ಸ್ಥಾನ ಶಾಶ್ವತವಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


