ರಾಜಕೀಯ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ: ಕೇರಳ ಜೆಡಿಎಸ್ ನಾಯಕನಿಗೆ ದೇವೇಗೌಡ ಸೂಚನೆ

ಕೇರಳ ನೀರಾವರಿ ಸಂಪನ್ಮೂಲ ಸಚಿವ ಹಾಗೂ ಜೆಡಿಎಸ್ ಶಾಸಕ ಮ್ಯಾಥ್ಯೂ ಟಿ ಥಾಮಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ...

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ: ಕೇರಳ ಜೆಡಿಎಸ್ ನಾಯಕನಿಗೆ ದೇವೇಗೌಡ ಸೂಚನೆ
ಜೆಡಿಎಸ್ ವರಿಷ್ಠ ದೇವೇಗೌಡ
Published On :
ಬೆಂಗಳೂರು: ಕೇರಳ ನೀರಾವರಿ ಸಂಪನ್ಮೂಲ ಸಚಿವ ಹಾಗೂ ಜೆಡಿಎಸ್ ಶಾಸಕ ಮ್ಯಾಥ್ಯೂ ಟಿ ಥಾಮಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ದೇವೇಗೌಡ ಅವರ ಈ ತೀರ್ಮಾನಕ್ಕೆ ಕೇರಳದ ಜೆಡಿಎಸ್ ಪಕ್ಷದಲ್ಲಿರುವ ಹಿರಿಯ ನಾಯಕರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ದೇವೇಗೌಡ ಅವರ ನಿರ್ಧಾರ ಆಶ್ಚರ್ಯವನ್ನು ತಂದಿದೆ ಎಂದು ಹೇಳಿದ್ದಾರೆ. 
ಕಚೇರಿಯಲ್ಲಿ ಸಚಿವರ ಪತ್ನಿ ಸಿಬ್ಬಂದಿಗಳೊಂದಿಗೆ ಜಾತಿವಾದಿ ನಿಂದನೆಗಳನ್ನು ಮಾಡುತ್ತಿರುವ ಹಿನ್ನಲೆಯಲ್ಲಿ ದೇವೇಗೌಡ ಅವರು ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ಕೇರಳದ ಆಡಳಿತಾರೂಢ ಎಲ್'ಡಿಎಫ್ ಪಕ್ಷದಲ್ಲಿ ಜೆಡಿಎಸ್ ಪಕ್ಷದ ಮೂವರು ಶಾಸಕರಿದ್ದಾರೆ. ಇದರಲ್ಲಿ ಥಾಮಸ್ ಕೂಡ ಒಬ್ಬರಾಗಿದ್ದಾರೆ. 
ಸಚಿವ ಸ್ಥಾನದಲ್ಲಿರಲು ಥಾಮಸ್ ಅವರಿಗೆ ಅವಕಾಶ ನೀಡಲಾಗಿತ್ತು. ಇದೀಗ ಮತ್ತೊಬ್ಬ ಶಾಸಕರಿಗೆ ಆ ಅವಕಾಶ ನೀಡುವುದು ಸಾಮಾನ್ಯ. ಹೀಗಾಗಿ ಪಕ್ಷ ಮತ್ತೊಬ್ಬ ಶಾಸಕರಿಗೆ ಆ ಅವಕಾಶ ನೀಡುವ ಸಲುವಾಗಿ ಥಾಮಸ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದೆ ಎಂದು ಕೇರಳ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಾನಿಶ್ ಅಲಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.