ರಾಜಕೀಯ

ರೈತಪರ ಸರ್ಕಾರ ನಮ್ಮದು, ಸರ್ಕಾರದ ಮೇಲಿರುವ ಭರವಸೆ ಕಳೆದುಕೊಳ್ಳಬೇಡಿ: ರೈತರಿಗೆ ಸಿಎಂ ಕುಮಾರಸ್ವಾಮಿ

ನಮ್ಮದು ರೈತಪರ ಸರ್ಕಾರವಾಗಿದ್ದು, ರೈತರು ತಾಳ್ಮೆಯಿಂದಿರಬೇಕು. ಸರ್ಕಾರದ ಮೇಲಿರುವ ಭರವಸೆಯನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

ರೈತಪರ ಸರ್ಕಾರ ನಮ್ಮದು, ಸರ್ಕಾರದ ಮೇಲಿರುವ ಭರವಸೆ ಕಳೆದುಕೊಳ್ಳಬೇಡಿ: ರೈತರಿಗೆ ಸಿಎಂ ಕುಮಾರಸ್ವಾಮಿ
ಮುಖ್ಯಮಂತ್ರಿ ಕುಮಾರಸ್ವಾಮಿ
Published On :
ಮಂಡ್ಯ: ನಮ್ಮದು ರೈತಪರ ಸರ್ಕಾರವಾಗಿದ್ದು, ರೈತರು ತಾಳ್ಮೆಯಿಂದಿರಬೇಕು. ಸರ್ಕಾರದ ಮೇಲಿರುವ ಭರವಸೆಯನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. 
ಮೇಲುಕೋಟೆ ವಿಧಾನಸಬಾ ಕ್ಷೇತ್ರದಲ್ಲಿ ಶುಕ್ರವಾರ ರೂ.718 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿರುವ ಅವರು, ಮಂಡ್ಯದಲ್ಲಿ ರೈತನ ಸಾವಿಗೆ ನಾನು ಕಾರಣನಲ್ಲ. ಆದರೆ, ರೈತ ಸಂಘದ ಹೆಸರು ಹೇಳಿಕೊಂಡು ಕೆಲವರು ನನ್ನ ವಿರುದ್ಧ ಚಿತಾವಣೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ. 
ಮಂಡ್ಯ ಜಿಲ್ಲೆಯಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಳುತ್ತಿದ್ದ ವ್ಯಕ್ತಿ ಸಾವನ್ನೇ ಮುಂದಿಟ್ಟುಕೊಂಡು ಸಿಎಂಗೆ ರೈತನಿಂದ ಆತ್ಮಹತ್ಯೆ ಸ್ವಾಗತ ಎಂದು ತಿರುಚಲಾಗಿದೆ ಎಂದು ದೂರಿದ್ದಾರೆ. 
ರೈತರ ರಕ್ಷಣೆಗೆ ಉತ್ತಮ ಕಾರ್ಯಗಳನ್ನು ಸರ್ಕಾರ ಮಾಡುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ. ಕುಟುಂಬ ಸಹಾಯ ಕೇಳಿದ್ದ. ಇದನ್ನೇ ಬಳಕೆ ಮಾಡಿಕೊಳ್ಳುತ್ತಿರುವ ಮಾಧ್ಯಮಗಳು ವಿಚಾರವನ್ನು ದೊಡ್ಡದು ಮಾಡುತ್ತಿವೆ. ನಮ್ಮ ಸರ್ಕಾರ ರೈತರ ಪರವಾಗಿದ್ದು, ರೈತರು ಸರ್ಕಾರ ಮೇಲಿರುವ ಭರವಸೆಯನ್ನು ಕಳೆದುಕೊಳ್ಳಬಾರದು ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.