ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್: ಜಾರಕಿಹೊಳಿ ಅಸಮಾಧಾನದ ಬೆಂಕಿಗೆ ತುಪ್ಪ ಸುರಿದರಾ ಶಿವಕುಮಾರ್?
ಸಚಿವರುಗಳಾದ ಡಿ,ಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿ ಹೊಳಿ ನಡುವೆ ಕೆಲ ತಿಂಗಳ ಹಿಂದೆ ಪಿಎಲ್ ಡಿ ಬ್ಯಾಂಕ್ ಚುನಾವಣೆಯಿಂದ ಉಂಟಾದ ಶೀತಲ ಸಮರ ...

Published On :
ಬೆಳಗಾವಿ: ಸಚಿವರುಗಳಾದ ಡಿ,ಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿ ಹೊಳಿ ನಡುವೆ ಕೆಲ ತಿಂಗಳ ಹಿಂದೆ ಪಿಎಲ್ ಡಿ ಬ್ಯಾಂಕ್ ಚುನಾವಣೆಯಿಂದ ಉಂಟಾದ ಬಿರುಕು ಇನ್ನು ಮುಂದುವರಿದಿದೆ.
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಭಟನೆ ವಾಪಸ್ ಪಡೆಯುವಂತೆ ಮನವೊಲಿಸುವ ಸಣ್ಣ ಪ್ರಯತ್ನವನ್ನು ಮಾಡಿರಲಿಲ್ಲ, ಆದರೆ ನಿನ್ನೆ ಸಚಿವ ಡಿ.ಕೆ ಶಿವಕುಮಾರ್ ಬೆಳಗಾವಿಗೆ ತೆರಳಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿ ಧರಣಿ ವಾಪಸ್ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಬಲ ನೀಡಿದ್ದಕ್ಕೆ ಆಕ್ರೋಶಗೊಂಡಿದ್ದ ಜಾರಕಿಹೊಳಿ ಸಹೋದರರು ಡಿಕೆ ಶಿವಕುಮಾರ್ ಬೆಳಗಾವಿ ರಾಜಕೀಯದಲ್ಲಿ ತಲೆ ಹಾಕದಂತೆ ಆಕ್ರೋಶ ವ್ಯಕ್ತ ಪಡಿಸಿದ್ದರು, ಈಗ ಪ್ರತಿಭಟನೆ ನಡೆಸುತ್ತಿದ್ದ ರೈತರು ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿರುವ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದಾರೆ.
ತಮ್ಮ ಒಡೆತನದ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ಯಾವುದೇ ಹಣ ನೀಡುವುಂತಿಲ್ಲ ಎಂದು ಹೇಳಿದ್ದರು. ಈಗ ಮತ್ತೆ ಶಿವಕುಮಾರ್ ಬೆಳಗಾವಿ ಕಬ್ಬು ಬೆಳೆಗಾರರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿರುವುದು ಉರಿವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


