ಡಿಕೆಶಿ ಮನೆಗೆ ಬಿಎಸ್ ವೈ ಭೇಟಿ, ಕುತೂಹಲ ಮೂಡಿಸಿದ ನಾಯಕರ ಮಾತುಕತೆ
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರ ಮನೆಗೆ...

Published On :
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಪ್ರತಿಪಕ್ಷ ನಾಯಕ ಬಿಎಸ್ ವೈ ಜಲಸಂಪನ್ಮೂಲ ಸಚಿವರೊಂದಿಗೆ ನಡೆಸಿದ ಮಾತುಕತೆಯ ವಿವರ ಬಹಿರಂಗವಾಗಿಲ್ಲ. ಆದರೆ ಡಿಕೆಶಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಶಿವಮೊಗ್ಗ ನೀರಾವರಿ ಯೋಜನೆಗಳು ಬಗ್ಗೆ ಮತ್ತು ಸಿಗಂದೂರು ಸೇತುವೆ ನಿರ್ಮಾಣದ ಬಗ್ಗೆ ಶಿವಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ ಎಂದರು.
ಡಿ ಕೆ ಶಿವಕುಮಾರ್ ಅವರು ಬಹಳ ಆತ್ಮೀಯವಾಗಿ ನಮ್ಮ ಜೊತೆ ಮಾತಾಡಿದ್ದಾರೆ. ನಾವಿಬ್ಬರೂ ಉತ್ತಮ ಸ್ನೇಹಿತರು. ಅವರನ್ನು ನಮ್ಮ ಜಿಲ್ಲೆಗೆ ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ.
ಶಾಸಕ ಹರತಾಳು ಹಾಲಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಹೊರಗಿಟ್ಟು ಪ್ರತ್ಯೇಕವಾಗಿ ಮಾತನಾಡಿರುವ ಈ ಇಬ್ಬರು ನಾಯಕರು ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಿಲ್ಲ. ರಾಜಕೀಯ ಚರ್ಚೆಯ ಬಗ್ಗೆ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ ಎಂದು ಬಿಎಸ್ವೈ ಜಾರಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


