ರಾಜಕೀಯ

2 ಕ್ಷೇತ್ರಗಳ ಉಪಚುನಾವಣೆ: ರಾಮನಗರದಿಂದ ಅನಿತಾ, ಜಮಖಂಡಿಯಿಂದ ಆನಂದ ನ್ಯಾಮಗೌಡ ಕಣಕ್ಕೆ?

ಮುಂಬರುವ ರಾಮನಗರ ಮತ್ತು ಜಮಖಂಡಿ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸಿದ್ಧವಾಗುತ್ತಿವೆ, ...

2 ಕ್ಷೇತ್ರಗಳ ಉಪಚುನಾವಣೆ: ರಾಮನಗರದಿಂದ ಅನಿತಾ, ಜಮಖಂಡಿಯಿಂದ ಆನಂದ ನ್ಯಾಮಗೌಡ ಕಣಕ್ಕೆ?
ಪತ್ನಿ ಅನಿತಾ ಜೊತೆ ಸಿಎಂ ಕುಮಾರ ಸ್ವಾಮಿ
Published On :
ಬೆಂಗಳೂರು: ಮುಂಬರುವ ರಾಮನಗರ ಮತ್ತು ಜಮಖಂಡಿ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸಿದ್ಧವಾಗುತ್ತಿವೆ, ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ, 
ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿರುವ ರಾಮನಗರ ವಿಧಾನ ಸಭೆ ಕ್ಷೇತ್ರಕ್ಕೆ ಅನಿತಾ ಕುಮಾರ ಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ, ದೇವೇಗೌಡ ಕುಟುಂಬದ ಭದ್ರಕೋಟೆಯಾಗಿರುವ ರಾಮನಗರದಿಂದ ಅನಿತಾ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಸಲಾಗುತ್ತಿದೆ. 
ಜಮಖಂಡಿಯಿಂದ ಕಾಂಗ್ರೆಸ್ಆನಂದ ನ್ಯಾಮಗೌಡ ಸ್ಪರ್ದಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. 
ಇನ್ನೂ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದು, ಅಕ್ಚೋಬರ್ 2ನೇ ವಾರದಲ್ಲಿ  ನಡೆಯ.ಲಿದೆ ಎಂದು ಹೇಳಲಾಗಿದೆ. ಈ ಸಂಬಂಧ ಅಕ್ಟೋಬರ್ 6ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಸಮಾಲೋಚಿಸಲು ಶನಿವಾರ ಸಿಎಂ ಕುಮಾರ ಸ್ವಾಮಿ ದೆಹಲಿಗೆ ತೆರಳಲಿದ್ದಾರೆ, 
ಮಂಗಳವಾರ ಡಿಸಿಎಂ ಪರಮೇಶ್ವರ್ ಅವರನ್ನ ಭೇಟಿ ಮಾಡಿದ ಸಿಎಂ ಕುಮಾರ ಸ್ವಾಮಿ, ಸಂಪುಟ ವಿಸ್ತರಣ ಮತ್ತು ನಿಗಮ- ಮಂಡಳಿ ನೇಮಕಾತಿ ಬಗ್ಗ ಚರ್ಚಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.