ರಾಜಕೀಯ

ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ರಮ್ಯಾ ರಾಜಿನಾಮೆ ವದಂತಿ: ರಮ್ಯಾ ಹೇಳಿದ್ದೇನು?

ನಟಿ ಕಮ್ ರಾಜಕಾರಿಣಿ, ಮಾಜಿ ಸಂಸದೆ ರಮ್ಯಾ ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ರಾಜಿನಾಮೆ ನೀಡುತ್ತಾರಾ ಎಂಬ ವಿಚಾರ ಇದೀಗ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ...

ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ರಮ್ಯಾ ರಾಜಿನಾಮೆ ವದಂತಿ: ರಮ್ಯಾ ಹೇಳಿದ್ದೇನು?
ರಮ್ಯಾ
Published On :
ಬೆಂಗಳೂರು: ನಟಿ ಕಮ್ ರಾಜಕಾರಿಣಿ, ಮಾಜಿ ಸಂಸದೆ ರಮ್ಯಾ ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ರಾಜಿನಾಮೆ ನೀಡುತ್ತಾರಾ ಎಂಬ ವಿಚಾರ ಇದೀಗ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 
ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ರಮ್ಯಾ ರಾಜಿನಾಮೆ ನೀಡಿ ಮುಂಬರುವ ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸಲು ಉದ್ದೇಶದಿಂದ ರಮ್ಯಾ ತಮ್ಮ ಹುದ್ದೆಗೆ ರಾಜಿನಾಮೆ ನೀಡುತ್ತಾರೆ ಎಂಬ ವದಂತಿ ರಾಜಕೀಯದಲ್ಲಿ ಹರಿದಾಡುತ್ತಿತ್ತು. 
ಇನ್ನು ಮೂರು ದಿನಗಳಿಂದ ರಮ್ಯಾ ಸಹ ಒಂದು ಟ್ವೀಟ್ ಅನ್ನು ಮಾಡದೇ ಇರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಇನ್ನು ಟ್ವೀಟರ್ ಖಾತೆಯಿಂದ ತನ್ನ ಹುದ್ದೆಯನ್ನು ರಮ್ಯಾ ತೆಗೆದಿದ್ದರು. 
ರಾಜಿನಾಮೆ ವದಂತಿ ನಿರಾಕರಿಸಿದ ರಮ್ಯಾ
ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ರಾಜಿನಾಮೆ ನೀಡುತ್ತಾರಾ ಎಂಬ ವದಂತಿಯನ್ನು ರಮ್ಯಾ ನಿರಾಕರಿಸಿದ್ದಾರೆ. ಸದ್ಯಕ್ಕೆ ನಾನು ರಜೆಯಲ್ಲಿದ್ದೇನೆ. ನಾಳೆಯೇ ಮರಳುತ್ತೇನೆ ಎಂದು ಹೇಳಿದ್ದಾರೆ. ಇನ್ನು ಟ್ವೀಟರ್ ಖಾತೆಯ ತಾಂತ್ರಿಕ ದೋಷದಿಂದ ಗೊಂದಲ ಸೃಷ್ಟಿಯಾಗಿದೆ ಎಂದು ರಮ್ಯಾ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.