ಸರ್ಕಾರಿ ಯಂತ್ರ ದುರುಪಯೋಗವಾಗದಂತೆ ಕಟ್ಟು ನಿಟ್ಟಿನ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ
ನವೆಂಬರ್ 3 ರಂದು ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ ತಮ್ಮ ಅಭ್ಯರ್ಥಿಗಳಿಗೆ ಸಹಾಯವಾಗುವಂತೆ ಸರ್ಕಾರಿ ಅಧಿಕಾರಿಗಳನ್ನು ...

Published On :
ಬೆಂಗಳೂರು: ನವೆಂಬರ್ 3 ರಂದು ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ ತಮ್ಮ ಅಭ್ಯರ್ಥಿಗಳಿಗೆ ಸಹಾಯವಾಗುವಂತೆ ಸರ್ಕಾರಿ ಅಧಿಕಾರಿಗಳನ್ನು ಹಾಗೂ ಆಡಳಿತ ಯಂತ್ರವನ್ನ ದುರುಪಯೋಗ ಪಡಿಸಿಕೊಳ್ಳುವುದನ್ನು ತಡೆಗಟ್ಟಲು ನೀತಿ ಸಂಹಿತೆಯನ್ನು ಸಮರ್ಥವಾಗಿ ಅನುಷ್ಠಾನಗೊಳಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ನಮಗೆ ಚುನಾವಣಾ ಆಯೋಗದ ಮೇಲೆ ಹೆಚ್ಚಿನ ನಂಬಿಕೆಯಿದೆ, ಆಯೋಗ ಪಾರದರ್ಶಕ ಹಾಗೂ ಮುಕ್ತ ಚುನಾವಣೆ ನಡೆಸುತ್ತದೆ ಎಂಬ ಭರವಸೆಯಿದೆ ಎಂದು ಹೇಳಿದ್ದಾರೆ, ಕಳೆದ ಚುನಾವಣೆಯಲ್ಲಿ ರಾಜ್ಯದ ಆಡಳಿತ ಯಂತ್ರ ನೀತಿ ಸಂಹಿತೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿತ್ತು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್, ರವಿ ಕುಮಾರ್ ಹೇಳಿದ್ದಾರೆ,
ನೀತಿ ಸಂಹಿತೆ ಅನುಷ್ಠಾನ ಸಂಬಂಧ ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ ಬರೆದಿದ್ದು, ಮತಾದಾರರನ್ನು ಓಲೈಸಲು ಸಮ್ಮಿಶ್ರ ಸರ್ಕಾರ ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಳ್ಳಲಿದೆ ಎಂಬ ಆತಂಕ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಸಮ್ಮಿಶ್ರ ಸರ್ಕಾರElection Commissionಚುನಾವಣಾ ಆಯೋಗನೀತಿ ಸಂಹಿತೆcoalition governmentcode of conduct.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


