ತನ್ನ ಪಾಲಿನ ಮತಗಳನ್ನು ಕಾಂಗ್ರೆಸ್ ಜೊತೆ ಹಂಚಿಕೊಳ್ಳಲು ಬಿಎಸ್ ಪಿಗೆ ಇಷ್ಟವಿಲ್ಲ!
ಕಾಂಗ್ರೆಸ್- ಜೆಡಿಎಸ್ ಪಕ್ಷದ ಸಮ್ಮಿಶ್ರ ಸರ್ಕಾರದಲ್ಲಿದ್ದ ಬಿಎಸ್ ಪಿಯ ಏಕೈಕ ಸಚಿವ ಎನ್. ಮಹೇಶ್ ರಾಜಿನಾಮೆ ನೀಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ, ,...

Published On :
ಮೈಸೂರು: ಕಾಂಗ್ರೆಸ್- ಜೆಡಿಎಸ್ ಪಕ್ಷದ ಸಮ್ಮಿಶ್ರ ಸರ್ಕಾರದಲ್ಲಿದ್ದ ಬಿಎಸ್ ಪಿಯ ಏಕೈಕ ಸಚಿವ ಎನ್. ಮಹೇಶ್ ರಾಜಿನಾಮೆ ನೀಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ, 2019ರ ಲೋಕಸಭೆ ಚುನಾವಣೆಗೆ ತಮ್ಮ ಪಕ್ಷದ ಪರ ಕೆಲಸ ಮಾಡಲು ಸಮಯ ಸಾಕಾಗುತ್ತಿಲ್ಲ, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕು, ಹೀಗಾಗಿ ರಾಜಿನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಬಿಎಸ್ಪಿ ಎರಡು ಪಕ್ಷಗಳು ದಲಿತರ ಬಗ್ಗೆ ಹೆಚ್ಚಿನ ಒಲವು ಹೊಂದಿವೆ, ಹಿಂದುಳಿದ ವರ್ಗದವರ ಬಗ್ಗೆ ಕಾಳಜಿಯಿದೆ, ಹೀಗಾಗಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದರೇ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಮಾಯಾವತಿ ಭಾವಿಸಿದ್ದರು.
2019ರ ಲೋಕಸಭೆ ಚುನಾವಣೆಯಲ್ಲಿ ಬಿಎಸ್ ಪಿ ಪ್ರಾಬಲ್ಯ ಕಡಿಮೆಯಾಗುತ್ತದೆ ಎಂಬುದು ಮಾಯಾವತಿ ಅವರಿಗೆ ಭಯ ಉಂಟಾಗಿದೆ,.ಹೀಗಾಗಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಸಂಬಂಧ ಪುನರ್ ಚಿಂತನೆ ಮಾಡುವಂತೆ ಮಾಡಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ, ಬಿಜೆಪಿ ಪ್ರಾಬಲ್ಯ ಅವರಿಗೆ ಆತಂಕ ತಂದಿಲ್ಲ, ಆದರೆ ಕಾಂಗ್ರೆಸ್ ತನ್ನ ಕಾರ್ಯಕ್ಷಮತೆಯಲ್ಲಿ ಸುಧಾರಣಗೊಂಡರೇ ಬಿಎಸ್ ಪಿ ಮಹತ್ವ ಕಳೆದುಕೊಳ್ಳುತ್ತದೆ ಎಂದು ಮಾಯಾವತಿ ಭಾವಿಸಿದ್ದಾರೆ.
ಹೀಗಾಗಿ 2019ರ ಲೋಕಸಭೆ ಚುನಾವಣೆವರೆಗೂ ಚುನಾವಣಾ ಪೂರ್ವ ಮೈತ್ರಿಯಲ್ಲಿ ಪಾಲ್ಗೋಳ್ಳದಿರಲು ನಿರ್ದರಿಸಿರುವ ಮಾಯಾವತಿ ಮುಂದಿನ ತಿಂಗಳು ರಾಜಸ್ತಾನ ಮತ್ತು ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡದಲ್ಲಿ ನಡೆಯುವ ವಿಧಾನ ಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ, ಜೊತೆಗೆ ಅತಂತ್ರ ಲೋಕಸಭೆ ನಿರ್ಮಾಣವಾದರೇ ಬೇರೆ ದಾರಿ ಹಿಡಿದುಕೊಳ್ಳುವ ಆಯ್ಕೆ ಕೂಡ ಇಟ್ಟುಕೊಂಡಿದ್ದಾರೆ ಎಂದು ಪ್ರೊ. ಮುಜಾಫರ್ ಆಜಾದಿ ಹೇಳಿದ್ದಾರೆ.
ಮೈತ್ರಿಯಿಂದ ಬಿಎಸ್ ಪಿ ಹಿಂದೆ ಸರಿದಿರುವುದು ಮೈತ್ರಿ ಕೂಟಕ್ಕೆ ಹಿನ್ನಡೆಯಾದಂತಾಗಿದೆ, ಬಿಎಸ್ ಪಿ ತನ್ನ ಮತಗಳನ್ನು ಕಾಂಗ್ರೆಸ್ ಗೆ ಬಿಡುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಬೇರೆ ರಾಜ್ಯಗಳಲ್ಲಿ ಬಿಎಸ್ ಪಿ ಸ್ವತಂತ್ರವಾಗಿ ಸ್ಪರ್ಧಿಸಬೇಕೆಂದು ಬಯಿದ ನಂತರ ಕರ್ನಾಟಕ ಮೈತ್ರಿ ಸರ್ಕಾರದಲ್ಲಿ ಮಹೇಶ್ ಸಚಿವರಾಗಿ ಮುಂದುವರಿಯುವುದು ಅಸಾಧ್ಯ ಎಂದು ಕಾಂಗ್ರೆಸ್ ಮುಖಂಜ ಬಿ,ಕೆ ಚಂದ್ರಶೇಖರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


