ಮಂಡ್ಯದಿಂದ ಸ್ಪರ್ಧಿಸಲು ಆರ್.ಅಶೋಕ್ ಹಿಂದೇಟು: ಬಿಜೆಪಿಯಿಂದ ಡಾ. ಸಿದ್ದರಾಮಯ್ಯ ಕಣಕ್ಕೆ
ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಡಾ. ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ....

Published On :
ಬೆಂಗಳೂರು/ ಶಿವಮೊಗ್ಗ: ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ.
ಮಾಜಿ ಸಚಿವ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಅವರನ್ನು ಓಲೈಸಲು ಬಿಜೆಪಿ ವಿಫಲವಾಗಿದೆ. ಹಾಗೂ ಮಾಜಿ ಡಿಸಿಎಂ ಆರ್. ಅಶೋಕ್ ಕೂಡ ಸ್ಪರ್ಧಿಸಲು ನಿರಾಕರಿಸಿದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,
ಎಲ್ಲ ಪ್ರಮುಖರೊಂದಿಗೆ ಚರ್ಚಿಸಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಡಾ.ಸಿದ್ದರಾಮಯ್ಯ ಅವರೇ ಬಿಜೆಪಿ ಅಭ್ಯರ್ಥಿ ಎಂದು ನಿರ್ಧರಿಸಲಾಗಿದೆ. ಕೇಂದ್ರಕ್ಕೆ ಅವರ ಹೆಸರು ಶಿಫಾರಸು ಮಾಡಲಾಗುತ್ತದೆ ಎಂದು ಶಿಕಾರಿಪುರದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿಗೆ ಸೇರ್ಪಡೆಯಾದ ಬಳಿಕ ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಸೇವೆ ನೋಡಿ ಈ ಪಕ್ಷದಲ್ಲಿ ಗುರುತಿಸಿಕೊಳ್ಳುವ ಆಸೆಯಿತ್ತು.. ಈಗ ಸೇವೆ ನಿವೃತ್ತಿ ನಂತರ ಪಕ್ಷಕ್ಕೆ ಬಂದಿದ್ದೇನೆ ಎಂದು ಡಾ. ಸಿದ್ದರಾಮಯ್ಯ ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSiddaramaiahಸಿದ್ದರಾಮಯ್ಯBS Yeddyurappaಬಿ.ಎಸ್ ಯಡಿಯೂರಪ್ಪMandya Lok Sabha constituencyಮಂಡ್ಯ ಲೋಕಸಭೆ ಕ್ಷೇತ್ರ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


