ಸಚಿವ ಮಹೇಶ್ ರಾಜೀನಾಮೆ ವಿಚಾರ ಬಿಎಸ್ ಪಿ ಪಕ್ಷದ ಆಂತರಿಕ ನಿರ್ಧಾರ: ಹೆಚ್ ಡಿ ಕುಮಾರಸ್ವಾಮಿ
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ಬಿಎಸ್ ಪಿಯ ಆಂತರಿಕ ನಿರ್ಧಾರ, ಇದಕ್ಕೂ ಸಮ್ಮಿಶ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಇದರಿಂದ ...

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ಬಿಎಸ್ ಪಿಯ ಆಂತರಿಕ ನಿರ್ಧಾರ, ಇದಕ್ಕೂ ಸಮ್ಮಿಶ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಇದರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆ ಕೂಡ ಇಲ್ಲ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಎಸ್‍ಪಿಯಲ್ಲಿ ನಡೆದ ಆಂತರಿಕ ಘಟನೆ ಬಗ್ಗೆ ಹೇಳೋಕೆ ಆಗಲ್ಲ. ಹೀಗಾಗಿ ನಾನು ಎಲ್ಲಾ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಪಕ್ಷ ಸಂಘಟನೆಗೆ ಸಾಧ್ಯವಾಗ್ತಿಲ್ಲ ಎಂದು ರಾಜೀನಾಮೆ ನೀಡಿರಬಹುದು. ನನ್ನ ಜತೆಯಲ್ಲಿ ಬಿಎಸ್‍ಪಿ ನಾಯಕರು ನಿರಂತರ ಸಂಪರ್ಕದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾವುದೇ ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವರ ರಾಜೀನಾಮೆ ಕುರಿತು ಯಾವುದೇ ಹೇಳಿಕೆಗಳನ್ನು ಬಹಿರಂಗವಾಗಿ ಹೇಳುವುದಕ್ಕೆ ಸಾಧ್ಯವಿಲ್ಲವೆಂದು ಕೂಡ ಸಿಎಂ ಹೇಳಿದರು. ರಾಜ್ಯದ ಬಿಎಸ್‍ಪಿ ಪಕ್ಷದ ಏಕೈಕ ಶಾಸಕ ಎನ್.ಮಹೇಶ್‍ರವರು ಪಕ್ಷದ ಸಂಘಟನೆ ದೃಷ್ಟಿಯಿಂದ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಸೂಚನೆಯಂತೆ ಅವರು ರಾಜೀನಾಮೆ ಕೊಟ್ಟಿರಬಹುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


