ಯಾವ ಪುರುಷಾರ್ಥಕ್ಕೆ ಎಚ್ ಎಎಲ್ ನಲ್ಲಿ ರಾಹುಲ್ ಸಂವಾದ: ಶೋಭಾ ಕರಂದ್ಲಾಜೆ ಲೇವಡಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಪುರಷಾರ್ಥಕ್ಕಾಗಿ ಎಚ್ಎಎಲ್ ನೌಕರರೊಂದಿಗೆ ಸಂವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಶೋಭಾ ...

Published On :
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಪುರಷಾರ್ಥಕ್ಕಾಗಿ ಎಚ್ಎಎಲ್ ನೌಕರರೊಂದಿಗೆ ಸಂವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಹುಲ್ ಹೋದ ಕಡೆಯಲ್ಲೆಲ್ಲ ಒಂದೊಂದು ಅಂಕಿ ಅಂಶ ಕೊಟ್ಟು ಬರುತ್ತಿದ್ದಾರೆ. ಈಗಾಗಲೇ ರಾಫೇಲ್ ವಿಮಾನಗಳ ಖರೀದಿ ಬಗ್ಗೆ ಸಂಸತ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದೇವೆ. ಆದರೂ ಕೂಡ ಅವರು ರಾಫೇಲ್ ವಿಮಾನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡ್ತಿದ್ದಾರೆ ಆರೋಪಿಸಿದರು.
ರಾಹುಲ್ ಗಾಂಧಿ ರಫೇಲ್ ಒಪ್ಪಂದವನ್ನು ಮುಂದಿಟ್ಟುಕೊಂಡು ಸಭೆ ನಡೆಸುತ್ತಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಸಂವಾದ ನಡೆಸ್ತಿದ್ದಾರೆ ಎದು ಪ್ರಶ್ನಿಸಿದ್ದಾರೆ.
ಸೈನ್ಯಕ್ಕೆ ಬೇಕಾದ ಅಗತ್ಯ ವಸ್ತುಗಳು ನಮ್ಮಲ್ಲಿ ಕಳೆದ 70 ವರ್ಷಗಳಲ್ಲಿ ಸರಿಯಾಗಿ ಪೂರೈಕೆ ಮಾಡಿಲ್ಲ. ಆದರೆ ಈಗ ಸರ್ಕಾರದ ರಫೇಲ್ ಯುದ್ಧ ವಿಮಾನ ಖರೀದಿಸಿದರೆ ಸಂಶಯ ಹುಟ್ಟು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruRahul Gandhiರಾಹುಲ್ ಗಾಂಧಿShobha Karandlajeಶೋಭಾ ಕರಂದ್ಲಾಜೆHAL Employeesಎಚ್ ಎಎಲ್ ಉದ್ಯೋಗಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


