ಸಚಿವ ಮಹೇಶ್ ರಾಜೀನಾಮೆಗು ಬಿಜೆಪಿಗು ಯಾವುದೇ ಸಂಬಂಧವಿಲ್ಲ: ಯಡಿಯೂರಪ್ಪ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ವೈಯಕ್ತಿಕವಾದದ್ದು, ಅದಕ್ಕೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ವೈಯಕ್ತಿಕವಾದದ್ದು, ಅದಕ್ಕೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಸ್ಥಾನದಲ್ಲಿದ್ದು, ವಿರೋಧ ಪಕ್ಷದ ಕೆಲಸವೇನೋ ಅದನ್ನೇ ಮಾಡುತ್ತೇವೆ. ಆದರೆ, ಒಂದು ವೇಳೆ ಯಾವುದಾದರೂ ಕಾರಣಕ್ಕೆ ಸರ್ಕಾರ ಉರುಳಿದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ನೋಡಲಾಗುವುದು ಎಂದರು.
ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಸಮ್ಮಿಶ್ರ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರು ಉಸಿರುಗಟ್ಟಿದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ವಿಧಾನಸೌಧ ಶಾಸಕರಿಲ್ಲದೆ ಭೂತ ಬಂಗಲೆಯಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


