ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆ: ರಾಜ್ಯದ ಮೂವರು ಮಾಜಿ ಸಿಎಂಗಳ ಪುತ್ರರು ಕಣಕ್ಕೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾವು ಏರತೊಡಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಕಣಕ್ಕೆ ಇಳಿಯುತ್ತಿದ್ದಾರೆ...

Published On :
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾವು ಏರತೊಡಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಕಣಕ್ಕೆ ಇಳಿಯುತ್ತಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಹಾಗೂ ಜೆಡಿಯು ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಅವರ ಪುತ್ರ ಮಹಿಮಾ ಪಟೇಲ್ ಅವರು ಕಣಕ್ಕೆ ಇಳಿಯುತ್ತಿದ್ದಾರೆ.
ಮನಸ್ತಾಪಗಳನ್ನು ಬದಿಗೊತ್ತಿ ಪಕ್ಷಕ್ಕಾಗಿ ದುಡಿಯಲು ನಿರ್ಧರಿಸಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು, ಜಂಟಿಯಾಗಿ ಮಧು ಬಂಗಾರಪ್ಪ ಅವರನ್ನು ಅಂತಿಮವಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ನಿಲ್ಲಿಸಿದೆ. ಈ ಮಧ್ಯೆ ಸ್ವಕ್ಷೇತ್ರ ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರು ಪುತ್ರನನ್ನು ಕಣಕ್ಕೆ ಇಳಿಸಿದ್ದು, ಚುನಾವಣೆ ಇದೀಗ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಮುಖ್ಯಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರೊಂದಿಗೆ ಕೂಡಿ ಕಾಂಗ್ರೆಸ್ ಬಲಿಷ್ಠ ನಾಯಕ ಡಿ.ಕೆ.ಶಿವಕುಮಾರ್ ಅವರು ಮಧು ಬಂಗಾರಪ್ಪ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.
ಇವೆಲ್ಲದರ ನಡುವೆ ಮಧುಬಂಗಾರಪ್ಪ ಅವರು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರಂತಹ ಸ್ಟಾರ್ ಪ್ರಚಾರಕರ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರು ಮಧು ಬಂಗಾರಪ್ಪ ಅವರ ಸಹೋದರಿಯಾಗಿದ್ದಾರೆ.
2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಭಾರೀ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೀಗ ಮಧು ಬಂಗಾರಪ್ಪ ಅವರು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಬೆಂಬಲದೊಂದಿಗೆ ಕಣಕ್ಕೆ ಇಳಿಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಬಿ.ವೈ.ರಾಘವೇಂದ್ರMadhu Bangarappaಮಧು ಬಂಗಾರಪ್ಪMahima patelಮಹಿಮಾ ಪಟೇಲ್Shivamogga Lok Sabha seatBY. Raghavendraಶಿವಮೊಗ್ಗ ಲೋಕಸಭಾ ಕ್ಷೇತ್ರ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


