ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಲಿಂಗಾಯತ ಪ್ರತ್ಯೇಕ ಧರ್ಮ ಕಾರಣ: ಡಿಕೆಶಿ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾರಣ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ...

Published On :
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾರಣ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನಕ್ಕೆ ಹಾಗೂ ಫಲಿತಾಂಶ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಧರ್ಮ ಇರಬಹುದು, ಆದರೆ ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ಶಿವಕುಮಾರ್ ತಿಳಿಸಿದ್ದಾರೆ. ಮೇ 12 ರಂದು ನಡೆದ ರಾಜ್ಯ.ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 79 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು, ಬಿಜೆಪಿ 104 ಸೀಟು ಗೆದ್ದಿತ್ತು.
ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬಾರದು, ಮಾಡಿದರೇ ಯಾವ ಫಲಿತಾಂಶ ಬರುತ್ತದೆ ಎಂಬುದಕ್ಕೆ ಕಳೆದ ವಿಧಾನಸಭೆ ಚುನಾವಣೆ ಜ್ವಲಂತ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ವಿಧಾನಸಭೆ ಚುನಾವಣೆassembly electiondefeatಸೋಲುD.K Shivakumarಡಿಕೆ ಶಿವಕುಮಾರ್Lingayats Rowಲಿಂಗಾಯತ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


