ಲಿಂಗಾಯತ ಹೋರಾಟದಿಂದ ಚುನಾವಣೆಯಲ್ಲಿ ಸೋಲಾಗಿಲ್ಲ: ಡಿಕೆಶಿ ಹೇಳಿಕೆಗೆ ಎಂಬಿ ಪಾಟೀಲ್ ಗರಂ
ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದಿಂದಾಗಿ ಕಾಂಗ್ರೆಸ್‍ಗೆ ಚುನಾವಣೆಯಲ್ಲಿ ಸೋಲಾಗಿದೆ ಎನ್ನುವುದು ತಪ್ಪು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Published On :
ವಿಜಯಪುರ: ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದಿಂದಾಗಿ ಕಾಂಗ್ರೆಸ್‍ಗೆ ಚುನಾವಣೆಯಲ್ಲಿ ಸೋಲಾಗಿದೆ ಎನ್ನುವುದು ತಪ್ಪು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
'ಪ್ರತ್ಯೇಕ ಧರ್ಮ ಹೋರಾಟದಿಂದಾಗಿ ಕಾಂಗ್ರೆಸ್‍ಗೆ ಹಿನ್ನಡೆಯಾಗಿದೆ. ಇದಕ್ಕಾಗಿ ಸಮುದಾಯದ ಕ್ಷಮೆ ಕೇಳುತ್ತೇನೆ' ಎಂದು ನಿನ್ನೆ ಸಚಿವ ಡಿ.ಕೆ.ಶಿವಕುಮಾರ್ ಬಾಳೆಹೊನ್ನೂರಿನಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತಂತೆ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಗರಂ ಆಗಿರುವ ಎಂಬಿ ಪಾಟೀಲ್, 'ರಾಜಕಾರಣವೇ ಬೇರೆ, ಧರ್ಮವೇ ಬೇರೆ. ಲಿಂಗಾಯತ ಸಮುದಾಯದ ಹೋರಾಟದಿಂದಾಗಿ ಕಾಂಗ್ರೆಸ್‍ಗೆ ಹಿನ್ನಡೆಯಾಯಿತು ಎಂಬುದು ಸರಿಯಲ್ಲ. ದಕ್ಷಿಣ ಕರ್ನಾಟಕ ಭಾಗದಲ್ಲಿ ಹೋರಾಟ ಹೆಚ್ಚು ಪರಿಣಾಮ ಬೀರಲಿಲ್ಲ. ಹಾಗಿದ್ದರೆ ಡಿ.ಕೆ.ಶಿವಕುಮಾರ್ ಅವರು ತಮ್ಮ ಭಾಗದಲ್ಲಿ ಎಷ್ಟು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿಕೊಂಡಿದ್ದಾರೆ' ಎಂದು ಎಂ.ಬಿ.ಪಾಟೀಲ್ ಪ್ರಶ್ನೆ ಮಾಡಿದರು.
ಧರ್ಮದ ವಿಚಾರದಲ್ಲಿ ಸರ್ಕಾರದ ಹಸ್ತ ಕ್ಷೇಪ ಬರುವುದಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಯಾವುದೇ ಪಕ್ಷಕ್ಕೆ ಹಾನಿಯಾಗಿಲ್ಲ. ಧರ್ಮದ ಹೆಸರಲ್ಲಿ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಚುನಾವಣೆ ಸೋಲು ಪಕ್ಷದ ನಾಲ್ತು ಗೋಡೆ ನಡುವೆ ಚರ್ಚಿಸಬೇಕಾದ ವಿಷಯ. ಇದರ ಬಗ್ಗೆ ಬಹಿರಂಗ ಚರ್ಚೆ ಸರಿಯಲ್ಲ. ಡಿಕೆಶಿ ಅವರ ಮಾರ್ಗ ಸರಿಯಲ್ಲ. ಡಿಕೆಶಿ ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಆದರೆ ಇಂತಹ ವಿಚಾರಗಳನ್ನು ಪಕ್ಷದ ಆಂತರಿಕ ಸಭೆಯಲ್ಲಿ ಚರ್ಚಿಸಬೇಕಿತ್ತು. ಬಹಿರಂಗ ಚರ್ಚೆ ಸರಿಯಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ನಮ್ಮ ಅಸ್ಮಿತೆ, ಬಸವಣ್ಣನವರನ್ನು ಗೌರವಿಸುವ ನಾವು ಕೆಂಪೇಗೌಡರನ್ನೂ ಅದೇ ರೀತಿ ಗೌರವಿಸುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯDK ShivakumarVijayapuraವಿಜಯಪುರMB Patilಎಂಬಿ ಪಾಟೀಲ್ಡಿಕೆ ಶಿವಕುಮಾರ್ಪ್ರತ್ಯೇಕ ಲಿಂಗಾಯತ ಧರ್ಮSeparate Lingayat Row
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


