ದೋಸ್ತಿ ಸರ್ಕಾರಕ್ಕೆ ಶಾಕ್ ನೀಡಲು ರಣತಂತ್ರ: ಹಾಸನದಲ್ಲಿ ಕ್ರಿಕೆಟಿಗ ಶ್ರೀನಾಥ್'ಗೆ ಬಿಜೆಪಿ ಟಿಕೆಟ್?
ರಾಜ್ಯದ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಲು ಬಿಜೆಪಿ ರಣತಂತ್ರವನ್ನೇ ರೂಪಿಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅಥವಾ ಕ್ಯಾಪ್ಟನ್ ಗೋಪಿನಾಥ್ ಅವರನ್ನು...

Published On :
ಹಾಸನ: ರಾಜ್ಯದ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಲು ಬಿಜೆಪಿ ರಣತಂತ್ರವನ್ನೇ ರೂಪಿಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅಥವಾ ಕ್ಯಾಪ್ಟನ್ ಗೋಪಿನಾಥ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹಾಸನ ಕ್ಷೇತ್ರದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಬದಲು ಪ್ರಜ್ವಲ್ ಸ್ಪರ್ಧಿಸಿದ್ದೇ ಆದರೆ, ಹಾಸನ ಜಿಲ್ಲೆಯವರೇ ಆಗಿರುವ ಶ್ರೀನಾಥ್ ಅಥವಾ ಗೋಪಿನಾಥ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚರ್ಚೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಈ ಮೂಲಕ ಹಾಸನದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಕಾರ್ಯಕರ್ತರಲ್ಲಿರುವ ಅಸಮಾಧಾನದ ಲಾಭವನ್ನು ಪಡೆಯಲು ಬಿಜೆಪಿ ತಂತ್ರ ರೂಪಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಮೈತ್ರಿ ಸರ್ಕಾರದ ಮೇಲೆ ಅಸಮಾಧಾನ ಇರುವ ನಾಯಕರನ್ನು ಬಿಜೆಪಿಗೆ ಸೆಳೆದು ಮೈತ್ರಿ ಪಕ್ಷಗಳನ್ನು ದುರ್ಬಲಗೊಳಿಸಲು ಬಿಜೆಪಿ ತಂತ್ರ ರೂಪಿಸಿದ್ದರು, ಇದರಂತೆ ಕಾಂಗ್ರೆಸ್ಸಿನ ಮಾಜಿ ಸಚಿವರಾದ ಎ.ಮಂಜು ಅಥವಾ ಬಿ.ಶಿವರಾಂ ಅವರನ್ನು ಪಕ್ಷಕ್ಕೆ ಸೆಳೆಯಲು ಚಿಂತನೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ.
ಇಷ್ಟೇ ಅಲ್ಲದೆ, ಜೆಡಿಎಸ್ ವರಿಷ್ಠರ ತವರಿನಲ್ಲೇ ಮೈತ್ರಿ ಪಕ್ಷಕ್ಕೆ ಬಿಗ್ ಶಾಕ್ ನೀಡಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮತ್ತೊಂದು ಮಾಸ್ಟರ್ ಪ್ಲಾನ್ ರೂಪಿಸಿದ್ದು, ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಕ್ಷಕ್ಕೆ ಬಾರದೇ ಹೋದರೆ, ಸೆಲೆಬ್ರಿಟಿಗಳನ್ನ ಕಣಕ್ಕಿಳಿಸಿ ಟಫ್ ಫೈಟ್ ನೀಡಲು ಚರ್ಚೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSbjpಬಿಜೆಪಿPoliticsರಾಜಕೀಯKarnatakaಕರ್ನಾಟಕಜೆಡಿಎಸ್ಹಾಸನಜಾವಗಲ್ ಶ್ರೀನಾಥ್Javagal SrinathCaptain GR Gopinathಕ್ಯಾಪ್ಟನ್ ಗೋಪಿನಾಥ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


