ಸಿಬಿಐ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಮೂರು ಪುಟಗಳ ಪತ್ರ ಬರೆದ ಖರ್ಗೆ
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...

Published On :
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರು ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಸಿಬಿಐ ನಿರ್ದೇಶಕರನ್ನು ಏಕಾಏಕಿ ಕಿತ್ತುಹಾಕಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ಇಲ್ಲ. ಸಿಬಿಐ ನಿರ್ದೇಶಕರ ಆಯ್ಕೆ ಉನ್ನತ ಮಟ್ಟದ ಕೊಲಿಜಿಯಂ ವ್ಯವಸ್ಥೆಯಿಂದ ಆಗಿರುತ್ತದೆ. ಈ ಕೊಲಿಜಿಯಂನಲ್ಲಿ ಪ್ರಧಾನಿ, ಪ್ರತಿಪಕ್ಷ ನಾಯಕ ಮತ್ತು ಸಿಜೆಐ ಇರುತ್ತಾರೆ. ಸಿಬಿಐ ನಿರ್ದೇಶಕರ ವಿರುದ್ಧ ದೂರು ಬಂದರೆ ಕೊಲಿಜಿಯಂ ಪರಿಶೀಲಿಸಬೇಕಾಗುತ್ತದೆ. ಆದರೆ ಕೇಂದ್ರ ಸರ್ಕಾರ ಕೊಲಿಜಿಯಂನಲ್ಲಿ ಈ ವಿಚಾರ ಚರ್ಚಿಸದೆ ಸಿಬಿಐ ನಿರ್ದೇಶಕರನ್ನು ಕಿತ್ತುಹಾಕಿದ್ದು, ಈ ಸಂಬಂಧ ತಾವು ಪ್ರಧಾನಿಗೆ ಮೂರು ಪುಟಗಳ ಪತ್ರ ಬರೆದಿರುವುದಾಗಿ ತಿಳಿಸಿದರು.
ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ರಾಫೆಲ್ ಡೀಲ್ ಪ್ರಕರಣದ ತನಿಖೆ ಆರಂಭಿಸಿದ್ದರಿಂದ ಅವರನ್ನು ಕಿತ್ತುಹಾಕಲಾಗಿದೆ. ಪ್ರಧಾನಿ ಮೋದಿ ಅವರು ರಾತ್ರಿ ನಿದ್ದೆ ಬಾರದೆ ರಾತ್ರೋರಾತ್ರಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯ ಮುಖ್ಯಸ್ಥರನ್ನು ಮತ್ತು ಉಪ ಮುಖ್ಯಸ್ಥರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ, ಸಿಬಿಐ ನಿರ್ದೇಶಕ ಹುದ್ದೆಗೆ ಮತ್ತೊಬ್ಬರನ್ನು ನೇಮಿಸಿದ್ದಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


